ರಾಜ್ಯದಲ್ಲಿರುವ ದೇವಸ್ಥಾನ ಸೇರಿ ಮತ್ತಿತರ ಪುರಾತನ ನಿರ್ಮಾಣಗಳನ್ನು ಸಂರಕ್ಷಿಸುವ ಉದ್ದೇಶದೊಂದಿಗೆ ರಾಜ್ಯ ಪುರಾತತ್ವ, ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆಯು ಹೊಸದಾಗಿ 317 ವಾಸ್ತುಶಿಲ್ಪ, ಪ್ರದೇಶಗಳನ್ನು ರಾಜ್ಯ ಸಂರಕ್ಷಿತ ತಾಣ ಎಂದು ನವ ಶಿಲಾಯುಗದ ಅವಧಿಯಲ್ಲಿ ನಿರ್ಮಾಣವಾದ ವಾಸ್ತುಶಿಲ್ಪಗಳು ಸಂರಕ್ಷಿಸದೆ ನಿರ್ಲಕ್ಷ್ಯಕ್ಕೊಳಗಾಗಿ ಕಣ್ಮರೆಯಾಗುತ್ತಿರುವು ದನ್ನು ಪತ್ತೆ ಮಾಡುವುದು ಮತ್ತು ಅದನ್ನು ಸಂರಕ್ಷಿಸುವ ಉದ್ದೇಶದೊಂದಿಗೆ ರಾಜ್ಯ ಪುರಾತತ್ವ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಒಟ್ಟು 317 ಸಂರಕ್ಷಿತವಲ್ಲದ ಪುರಾತನ ವಾಸ್ತುಶಿಲ್ಪಗಳನ್ನು ಪತ್ತೆ ಮಾಡಿ, ಅವುಗಳ ಸಂರಕ್ಷಣೆಗೆ ಕ್ರಮಗಳ ಕುರಿತು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಕಳುಹಿಸುವಂತೆ ಸೂಚಿಸಲಾಗಿದೆ. ಮೊದಲ ಹಂತದಲ್ಲಿ 200 ಮತ್ತು ಎರಡನೇ ಹಂತದಲ್ಲಿ 117 ವಾಸ್ತುಶಿಲ್ಪಗಳನ್ನು ಸಂರಕ್ಷಿಸಲು ನಿರ್ಧರಿಸಲಾಗಿದೆ. ಕಳೆದ ಮೇ ತಿಂಗಳ ಅಂತ್ಯದ ವೇಳೆಗೆ ಎರಡೂ ಹಂತಗಳಲ್ಲಿ 119 ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದು, ಇನ್ನೂ 198 ಪ್ರಸ್ತಾವನೆಗಳು ಸಲ್ಲಿಕೆಯಾಗಬೇಕಿದೆ ಎಂದು ರಾಜ್ಯ ಪುರಾತತ್ವ ಇಲಾಖೆ ಮಾಹಿತಿ ನೀಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



