ಚಿತ್ರದುರ್ಗ ನಗರದಲ್ಲಿ ಶಾಕಿಂಗ್ ಘಟನೆ ನಡೆದಿದೆ. ರಾಮದಾಸ್ ಕಂಪೌಂಡ್ ಬಡಾವಣೆಯಲ್ಲಿ 46 ವರ್ಷದ ಪ್ರಮೋದ್ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ.
ಮಾಹಿತಿ ಪ್ರಕಾರ, ಪ್ರಮೋದ್ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ರಾತ್ರಿ ಸಮಯದಲ್ಲಿ ದಾಳಿ ನಡೆದಿದೆ. ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ದುಷ್ಕರ್ಮಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗೆ ಸುಮಾರು 8 ಗಂಟೆಗೆ ಮನೆ ಬಾಗಿಲು ತೆರೆಯುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರುಣ್ ಗೌಡ ಹಾಗೂ ಸಿಪಿಐ ನಯೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
👉 ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
