ನಟ ದರ್ಶನ್ ‘ಡೆವಿಲ್’ ಸಿನಿಮಾದ ಹಾಡಿನ ಶೂಟ್ಗಾಗಿ ಥೈಲ್ಯಾಂಡ್ ನಲ್ಲಿದ್ದಾರೆ. ಶೂಟಿಂಗ್ ಮಧ್ಯೆ ಅವರು ಸ್ನೇಹಿತರು, ಸಿನಿಮಾ ತಂಡದವರ ಜೊತೆ ಮೋಜು-ಮಸ್ತಿ ಮಾಡುತ್ತಿರುವ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ಸ್ನೇಹಿತರ ಜೊತೆ ಪಾರ್ಟಿ ಮಾಡಿರುವ, ಬೈಕ್, ಕಾರು ಓಡಿಸುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ದರ್ಶನ್ ಯಾಚ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ದರ್ಶನ್ ಅವರಿಗೆ ಬೈಕ್ ಹಾಗೂ ಕಾರುಗಳ ಬಗ್ಗೆ ಸಖತ್ ಕ್ರೇಜ್ ಇದೆ. ಈಗ ಯಾಚ್ ಕೂಡ ರನ್ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



