ವಿಜಯಪುರ: ಇಪ್ಪತ್ತು ಸಾವಿರ ರುಪಾಯಿ ಸಾಲದ ಹಣಕ್ಕಾಗಿ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಚಾಲಕನಾದ ಚಾಂದಸಾಬ್ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಚಾಲಕ ಕೆಲಸಕ್ಕೆ ಬರುವುದಾಗಿ ಹೇಳಿ ಆರೋಪಿ ಕುಮಾರಗೌಡ ಬಿರಾದಾರ್‌ಬಳಿ ₹20 ಸಾವಿರ ಹಣ ಪಡೆದಿದ್ದ. ಬಳಿಕ ಕೆಲಸಕ್ಕೂ ಹೋಗದೇ ಹಣವನ್ನೂ ವಾಪಸ್ ಕೊಡದೇ ಸತಾಯಿಸುತ್ತಿದ್ದ. ಇದರಿಂದ ಕುಪಿತರಾದ ಆರೋಪಿಗಳಾದ ಕುಮಾರಗೌಡ ಬಿರಾದಾರ ಹಾಗೂ ಶ್ರೀಶೈಲ ಬಿರಾದಾರ ಸೇರಿ ಚಡಚಣದಲ್ಲಿ ಸಿಕ್ಕ ಚಾಂದಸಾಬ್‌ನನ್ನು ತಮ್ಮ ಪಲ್ಸರ್ ಬೈಕ್ ಮೇಲೆ ಹತ್ತಿಸಿಕೊಂಡು ಹತ್ತಳ್ಳಿ ಗ್ರಾಮಕ್ಕೆ ಕರೆತಂದಿದ್ದಾರೆ. ಬಳಿಕ ಮಲ್ಲಿಕಾರ್ಜುನ ಬಿರಾದಾರ್ ಅಂಗಡಿಯ ಮುಂದೆ ಕಾಲಿಗೆ ಸರಪಳಿ ಕಟ್ಟಿ ಬೀಗ ಜಡಿದು ಹಣಕ್ಕಾಗಿ ಒತ್ತಾಯಿಸಿದ್ದಾರೆ. ಸಂಜೆ ವೇಳೆಗೆ ಸರಪಳಿ ಬಿಚ್ಚಿ ಕಳುಹಿಸಿ ಕೊಟ್ಟಿದ್ದಾರೆ. ಘಟನೆ ನಡೆದು ನಾಲೈದು ದಿನ ದಿನಗಳಾಗಿದ್ದು, ಚಾಂದಸಾಬ್ ಮುಲ್ಲಾ ಶನಿವಾರ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



