ಚಿತ್ರದುರ್ಗ: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನಾ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಶೀಘ್ರದಲ್ಲಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು, ನನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ಹುದ್ದೆಗೆ ನೇಮಕ ಮಾಡುವಂತೆ ಜಿಲ್ಲಾ ಬಡಗಿ ನೌಕರರ ಸಂಘದ ಅಧ್ಯಕ್ಷ ಎ.ಜಾಕೀರ್ ಹುಸೇನ್ ಮನವಿ ಮಾಡಿದರು.
ಚಿತ್ರದುರ್ಗ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲಾ ಅಧ್ಯಕ್ಷರ ಹುದ್ದೆಗೆ ಹಲವು ಮಂದಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ನಾನು ಮಾಡಿದಂಥ ಅಭಿವೃದ್ಧಿ ಕೆಲಸಗಳು ಯಾರು ಮಾಡಿಲ್ಲ. 3 ದಶಕಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ವಿಶೇಷವಾಗಿ ಕೂಲಿಕಾರ್ಮಿಕರು, ವಿವಿಧ ವರ್ಗಗಳ ಕಾರ್ಮಿಕರ ಸಂಘಟನೆಗಳು, ಜನಪರ ಸಂಘಟನೆಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಜೊತೆಗೆ ಅಜಾದ್ ನಗರದ ಅಂಜುಮಾನ್ ಮಸೀದಿ ಆಡಳಿತ ಮಂಡಳಿಗೆ ನಿರ್ದೇಶನಕಾಗಿ ನೇಮಕ ಆಗಿದ್ದು, ಜಿಲ್ಲೆಯಲ್ಲಿ ಮುಸ್ಲಿಂ ಸಮಾಜದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಈ ಒಂದು ಬಾರಿ ಅವಕಾಶ ಕೊಟ್ಟರೆ ಸಂಸ್ಥೆಯ ಘನತೆಯನ್ನು ತರುವಂತಹ ಕೆಲಸ ಮಾಡುತ್ತೇನೆ ಜೊತೆಗೆ ವಕ್ಫ್ ಬೋರ್ಡ್ ಸಮಿತಿಗೆ ಆದಾಯ ಮೂಲ ಹೆಚ್ಚಿಸುವ ಭರವಸೆ ನೀಡಿದರು. ಇದೆ ವೇಳೆ ಟಿಪ್ಪು ಖಾಸಿಂ ಆಲಿ, ಜುಬಿ, ಅಸ್ಲಾಂ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



