ಹೊಳಲ್ಕೆರೆ: ಜಮೀನಿನಲ್ಲಿ ವಿದ್ಯುತ್ ಕೆಲಸ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿರುವ ಘಟನೆ, ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ನಡೆದಿದೆ.ದಾವಣಗೆರೆ ಮೂಲದ ಕಾರ್ಮಿಕ ನಜೀರ್ (30), ಫಾರೂಕ್ (30) ಹಾಗೂ ಹೊಳಲ್ಕೆರೆ ತಾಲೂಕಿನ ಗ್ಯಾರೇಹಳ್ಳಿಯ ಶ್ರೀನಿವಾಸ್ (35) ಮೃತ ದುರ್ದೈವಿಗಳು.
ಶ್ರೀನಿವಾಸ್ ತೋಟದಲ್ಲಿ ಅಡಕೆ ಶೇಡ್ ನಿರ್ಮಾಣ ವೇಳೆ ಈ ದುರಂತ ಸಂಭವಿಸಿದೆ. ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ, ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ
ಚಿಕ್ಕಜಾಜೂರು ಇನ್ಸ್ಪೆಕ್ಟರ್ ನೇತ್ರಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



