ಉಪನ್ಯಾಸಕರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ತರಗತಿಗಳಲ್ಲಿ ಬೋಧನೆ ಮಾಡಿದಾಗ ಮಾತ್ರ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ತಿಮ್ಮಯ್ಯ ತಿಳಿಸಿದರು. ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಚಿಂತನ ಮಂಥನ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತಾನಾಡಿದರು.
ವಿದ್ಯಾರ್ಥಿಗಳಲ್ಲಿ ಕಲಿಕಾಸಕ್ತಿ ಮೂಡಿಸಲು ಉಪನ್ಯಾಸಕರು ಕೆಲವೊಮ್ಮೆ ಬಣ್ಣ ಹಚ್ಚಿಕೊಳ್ಳದೆ ಅಭಿನಯದ ಮೂಲಕ ಬೋಧನೆ ಮಾಡುವ ಕಲೆಗಾರಿಕೆಯನ್ನು ರೂಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳನ್ನು ತಲುಪಲು ಸಾಧ್ಯವಾಗುತ್ತದೆ.ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಆರು ಗುಂಪುಗಳನ್ನಾಗಿ ವಿಂಗಡಿಸಿ ಪ್ರತಿ ಗುಂಪಿನ ಮೇಲುಸ್ತುವಾರಿಯನ್ನು ಒಬ್ಬೊಬ್ಬ ಉಪನ್ಯಾಸಕರು ವಹಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಮನ ಹರಿಸುವಂತೆ ಸೂಚನೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಆರ್.ಮಲ್ಲೇಶ್ ಮಾತನಾಡಿ ಉಪನ್ಯಾಸಕರ ಸೇವಾ ಭದ್ರತೆ ಆಯಾ ಕಾಲೇಜಿನ ಫಲಿತಾಂಶದ ಮೇಲೆ ನಿಂತಿದೆ. ಹೀಗಾಗಿ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸುವಲ್ಲಿ ಪ್ರತಿ ಉಪನ್ಯಾಸಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪಿ.ಎಂ.ಜಿ ರಾಜೇಶ್ ಮಾತಾನಾಡಿ ಇಲಾಖಾ ನಿಯಮಗಳು ಮತ್ತು ಮಾರ್ಗಸೂಚಿಗಳನ್ವಯ ಫಲಿತಾಂಶ ಸುಧಾರಿಸಲು ಮಾನ್ಯ ಉಪನಿರ್ದೆಶಕರು ಕೈಗೊಂಡಿರುವ ಚಿಂತನ ಮಂಥನ ಸಭೆ ಅರ್ಥಪೂರ್ಣ ವಾಗಿದೆ ಎಂದರುಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸದರಿ ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಬಿ.ನರಸಿಂಹಮೂರ್ತಿ ಮಾತಾನಾಡಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪರಸ್ಪರ ಸಹಕಾರ,ಶ್ರದ್ಧೆ ಮತ್ತು ಸಹಭಾಗಿತ್ವದಿಂದ ಒಗ್ಗೂಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲಸ ನಿರ್ವಹಿಸಿದಾಗ ಕಾಲೇಜಿನ ಫಲಿತಾಂಶದಲ್ಲಿ ಸುಧಾರಣೆ ಸಾಧ್ಯವಾಗುತ್ತದೆ ಎಂದರು.
ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ವಸಂತಕುಮಾರ್,ಖಜಾಂಚಿ ಡಾ.ಎಸ್.ಎ.ಖಾನ್, ಪ್ರಾಂಶುಪಾಲರಾದ ಸಣ್ಣಪಾಲಯ್ಯ, ಆರ್.ಮುಸ್ತಫ, ಬಿ.ಕೃಷ್ಣಪ್ಪ ಹಾಗೂ ತಾಲ್ಲೂಕಿನ ಎಲ್ಲಾ ಸರ್ಕಾರಿ,ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು,ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



