ಹೊಸದುರ್ಗ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ಇಂದು ರಾತ್ರಿ 7: 30 ಕ್ಕೆ ಕರಡಿ ಮತ್ತೆ ಕಾಣಿಸಿಕೊಂಡಿದ್ದು . ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಹಿಂದೆ ಪಟ್ಟಣದ ಹಲವೆಡೆ ಕರಡಿಗಳ ಹಾವಳಿ ಹೆಚ್ಚಾಗಿ ಜನರು ಭಯಭೀತರಾಗಿದ್ದು. ಕರಡಿಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು. ಜನರು ಮನೆಯಿಂದ ಹೊರಬರಲು ಹೆದರುವಂತಹ ಪರಿಸ್ಥಿತಿಯಿದೆ. ಹೀಗೆ ಕಾಡು ಪ್ರಾಣಿಗಳು ಪಟ್ಟಣದಲ್ಲಿ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಪ್ರತ್ಯಕ್ಷವಾಗಿರುವ ಬಗ್ಗೆ ಪರಿಶೀಲನೆ ನಡೆಸಿ. ಕರಡಿಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಕ್ರಮವಹಿಸಬೇಕು ಎಂದು ಕರುನಾಡ ವಿಜಯ ಸೇನೆ ಚಿತ್ರದುರ್ಗ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



