ಬೆಂಗಳೂರು: ಧರ್ಮಸ್ಥಳಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ ಇಬ್ಬರು ಅಧಿಕಾರಿಗಳು ಹಿಂದೆ ಸರಿದಿರುವುದಾಗಿ ತಿಳಿದುಬಂದಿದೆ.ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ. ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ, ಆಂತರಿಕ ಭದ್ರತಾ ವಿಭಾಗದ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದರು.
ಸದ್ಯ ಸಿಎಆರ್ ಕೇಂದ್ರ ಸ್ಥಾನದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಅವರು ವಯಕ್ತಿಕ ಕಾರಣಗಳಿಂದ ಹಿಂದೆ ಸರಿಯಲು ನಿರ್ಧರಿಸಿ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ತನಿಖೆಯ ರೂಪುರೇಷೆ ಕುರಿತು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ನಡೆದಿದ್ದ ಸಭೆಗೂ ಅವರು ಗೈರಾಗಿದ್ದರು. ಅವರ ಮನವಿಯನ್ನು ಪುರಸ್ಕರಿಸುವಂತೆ ಪ್ರಣವ್ ಮೊಹಾಂತಿ, ತಂಡದಿಂದ ಸೌಮ್ಯಲತಾ ಅವರ ಹೆಸರನ್ನು ಕೈ ಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ.ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಿ ಆದೇಶ
ತನಿಖೆಗೆ ನಿಯೋಜಿಸಿದ್ದ 20 ಅಧಿಕಾರಿಗಳ ಪೈಕಿ, ಮತ್ತೋರ್ವ ಐಪಿಎಸ್ ಯೇತರ ಅಧಿಕಾರಿಯೊಬ್ಬರು ತಂಡದಿಂದ ಕೈ ಬಿಡುವಂತೆ ಪತ್ರ ಬರೆದಿದ್ದು, ಈ ವಿಚಾರವನ್ನು ಪ್ರಣವ್ ಮೊಹಾಂತಿ, ಸರ್ಕಾರದ ಗಮನಕ್ಕೆ ತಂದಿದ್ದು, ಹೊಸಬರ ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



