Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಚಿತ್ರದುರ್ಗ: ಜೂನ್ 5 ರಂದು ನಗರದ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಡಿ.ಕೆ.ಶಿವಕುಮಾರ್ ಸರ್ಕಾರ ರಾಹುಲ್ ಗಾಂಧಿ, ಸಿದ್ದರಾಮಯ್ಯ ರಿಮೋಟ್ ಕಂಟ್ರೋಲ್‌ನಿಂದ ನಡೆಯುತ್ತಿದೆ: ಆರ್.ಅಶೋಕ್ ಲೇವಡಿ
ರಾಜ್ಯ

ಡಿ.ಕೆ.ಶಿವಕುಮಾರ್ ಸರ್ಕಾರ ರಾಹುಲ್ ಗಾಂಧಿ, ಸಿದ್ದರಾಮಯ್ಯ ರಿಮೋಟ್ ಕಂಟ್ರೋಲ್‌ನಿಂದ ನಡೆಯುತ್ತಿದೆ: ಆರ್.ಅಶೋಕ್ ಲೇವಡಿ

Times Of Bayaluseeme StaffBy Times Of Bayaluseeme StaffJune 4, 2026No Comments3 Mins Read
Share WhatsApp Facebook Twitter Threads Telegram
Follow Us
Facebook Instagram
r-ashoka-criticizes-dk-shivakumar-government
Share
WhatsApp Twitter Facebook Telegram

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು ಹಳೆ ಸಿನಿಮಾದ ಪೋಸ್ಟರ್‌ ಬದಲಾದಂತಿದೆ. ಮುಖ್ಯಮಂತ್ರಿ ನಿವಾಸದ ಮುಂಭಾಗದ ಫಲಕದಲ್ಲಿ ಹೆಸರು ಬದಲಾಗಿದೆಯೇ ಹೊರತು ಜನರ ಕಷ್ಟಗಳು ನೀಗಿಲ್ಲ. ರಾಜ್ಯಕ್ಕೆ ಹೊಸ ಸಚಿವರು ಸಿಗುತ್ತಾರೆ ಎಂಬ ನಿರೀಕ್ಷೆ ಇದ್ದರೂ, ಹೊಸ ಮುಖಗಳು ಕಂಡಿಲ್ಲ. ಸಿದ್ದರಾಮಯ್ಯನವರ ಮಗ ಯತೀಂದ್ರ ಸಚಿವರಾಗಿ ಬಂದಿದ್ದಾರೆಯೇ ಹೊರತು ಹೊಸದೇನೂ ಇಲ್ಲ ಎಂದರು.

ಮಳೆಯಿಂದಾಗಿ ಬೆಳೆಹಾನಿಯಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿದೆ. ಐಪಿಎಲ್‌ ಸಂಭ್ರಮಾಚರಣೆಯಲ್ಲಿ ಹನ್ನೊಂದು ಅಮಾಯಕರ ಹತ್ಯೆಯಾಯಿತು. ಭ್ರಷ್ಟಾಚಾರದ ನೋವಿನಿಂದ ಅಧಿಕಾರಿಗಳ ಸಾವು, ಸರ್ಕಾರದ ನಿರ್ಲಕ್ಷ್ಯದಿಂದ ಬಾಣಂತಿಯರ ಸಾವು, ಮೈಕ್ರೋ ಫೈನಾನ್ಸ್‌ ಒತ್ತಡದಿಂದ ಜನರ ಸಾವು, ಸಂಬಳ ಸಿಗದೆ ನೌಕರರ ಸಾವು, ಆಸ್ಪತ್ರೆ ಗೋಡೆ ಕುಸಿದು ಬೀದಿ ಬದಿ ವ್ಯಾಪಾರಿಗಳ ಸಾವು, ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಸ್ತೆಗಳಲ್ಲಿ ಗುಂಡಿಗಳ ಹಾವಳಿ ಹೀಗೆ ಅನೇಕ ಸಮಸ್ಯೆಗಳು ಇನ್ನೂ ಇದೆ. ಜನರು ಉತ್ತಮ ಆಡಳಿತ ಕೇಳಿದರೆ, ಕಾಂಗ್ರೆಸ್‌ ಪಕ್ಷ ಕುರ್ಚಿಯ ಬದಲಾವಣೆ ಮಾತ್ರ ಮಾಡಿದೆ ಎಂದರು.

ಬೆಂಗಳೂರಿನಲ್ಲಿ ನೂರಾರು ಕಟೌಟ್‌ಗಳನ್ನು ಅಳವಡಿಸಲಾಗಿದೆ. ಫಲಕ ಹಾಕಬೇಡಿ ಎಂದು ಸಿಎಂ
ಹೇಳಿದರೂ ಅವುಗಳನ್ನು ಅಳವಡಿಸಲಾಗಿದೆ. ಅಂದರೆ ಮುಖ್ಯಮಂತ್ರಿ ಏನೇ ಹೇಳಿದರೂ ಅದು ಅನುಷ್ಠಾನವಾಗುವುದಿಲ್ಲ ಎಂಬುದು ಸಾಬೀತಾಗಿದೆ.

ಮಹಿಳಾ ವಿರೋಧಿ ಕಾಂಗ್ರೆಸ್

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್‌ ವಿರೋಧಿಸಿದೆ. ನಿನ್ನೆ ನಡೆದ ಪದಗ್ರಹಣ ಸಮಾರಂಭದಲ್ಲಿ ಒಬ್ಬರೇ ಒಬ್ಬ ಮಹಿಳೆಗೆ ಅವಕಾಶ ನೀಡಿಲ್ಲ. ಕಾಂಗ್ರೆಸ್‌ ಮಹಿಳೆಯರಿಗೆ ಮೋಸ ಮಾಡಿದೆ ಎಂದರು.

ಸಂವಿಧಾನದ ಪುಸ್ತಕ ಏಕೆ?

ಪ್ರಮಾಣವಚನದ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ ಸಂವಿಧಾನದ ಪುಸ್ತಕ ಹಿಡಿದುಕೊಂಡಿದ್ದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಸಿಎಂಗೆ ಎಲ್ಲ ಅಧಿಕಾರ ನೀಡಿದ್ದಾರೆ. ಆದರೆ ಸಚಿವ ಸಂಪುಟದಲ್ಲಿ ಡಿ.ಕೆ.ಶಿ ಕಡೆಗಿನ ಯಾವುದೇ ಶಾಸಕರು ಇಲ್ಲ. ಅಂದರೆ ಎಲ್ಲವನ್ನೂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್‌ ತೀರ್ಮಾನ ಮಾಡಿದೆ. ಡಿ.ಕೆ.ಶಿ ಅವರಿಗೆ ಯಾವುದೇ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ ಈಗಾಗಲೇ ಇ-ಖಾತಾ ಹೆಸರಲ್ಲಿ ದಂಧೆ ನಡೆಯುತ್ತಿದೆ. ಇದನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಿದರೆ ಇನ್ನಷ್ಟು ದಂಧೆ ನಡೆಯುತ್ತದೆ. ಸರ್ವರ್‌ ಡೌನ್‌ ಎಂದು ಹೇಳಿ ಜನರನ್ನು ವಂಚಿಸಲಾಗುತ್ತಿದೆ. ಲಂಚ ಕೊಟ್ಟರೆ ಮಾತ್ರ ಸರ್ವರ್‌ ಕೆಲಸ ಮಾಡುತ್ತದೆ ಎಂದು ಹರಿಹಾಯ್ದರು.

ನೇಮಕದ ಬಗ್ಗೆ ಸುಳ್ಳು ಭರವಸೆ

56,000 ಹುದ್ದೆಗಳ ಸರ್ಕಾರಿ ನೇಮಕಾತಿ ಬಗ್ಗೆಯೂ ಸುಳ್ಳು ಹೇಳಲಾಗಿದೆ. ಈ ಹಿಂದೆಯೇ ಇದರ ಬಗ್ಗೆ ತೀರ್ಮಾನವಾಗಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ. ಇಷ್ಟೊಂದು ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ಹಣಕಾಸು ಕೊರತೆ ಇದೆ. ಇಂತಹ ಸ್ಥಿತಿಯಲ್ಲಿ ಹೊಸ ನೇಮಕಾತಿ ಮಾಡಲು ಸಾಧ್ಯವೇ ಇಲ್ಲ ಎಂದರು.

ಕಾಂಗ್ರೆಸ್ ನಿರಾಶ್ರಿತರಿಗೆ ಭಾರತ್ ಜೋಡೊ ಸಂಘಟನೆ*

ಭಾರತ್‌ ಜೋಡೋಗೂ ಸರ್ಕಾರಕ್ಕೂ ಏನು ಸಂಬಂಧವಿದೆ? ಇದರಿಂದ ಕಾಂಗ್ರೆಸ್‌ನ ನಿರಾಶ್ರಿತರಿಗೆ ಪ್ರಯೋಜನವಾಗಲಿದೆಯೇ ಹೊರತು ಯುವಜನರಿಗೆ ಉಪಯೋಗವಿಲ್ಲ. ಈಗಾಗಲೇ ಗುತ್ತಿಗೆದಾರರಿಗೆ ಬಾಕಿ ಕೊಡಬೇಕಿದೆ. ಆ ಹಣವನ್ನು ಕೊಟ್ಟರೆ ಸಾಕಿತ್ತು. ಉತ್ತರ ಕರ್ನಾಟಕದಲ್ಲಿ ಮಕ್ಕಳು ಶಾಲೆಯ ಒಳಗೆ ಹೋಗದಂತಹ ಸ್ಥಿತಿ ಇದೆ. ಇಂತಹ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ಸಾಕಾಗಿದೆ. ಸುಖಾಸುಮ್ಮನೆ ಘೋಷಣೆಗಳನ್ನು ಮಾಡಿದರೆ ಸಾಲುವುದಿಲ್ಲ. ಅಬಕಾರಿ ಬಿಟ್ಟರೆ ಎಲ್ಲ ಇಲಾಖೆಗಳಲ್ಲಿ ಆದಾಯ ಕಡಿಮೆಯಾಗಿದೆ. ಯೋಜನೆಗಳನ್ನು ಘೋಷಣೆ ಮಾಡಿ, ಅದನ್ನು ಜಾರಿ ಮಾಡದೆ ನಂತರ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪ ಮಾಡುತ್ತಾರೆ ಎಂದು ದೂರಿದರು.

ಹಣಕಾಸು ಶ್ವೇತಪತ್ರ ಮಂಡಿಸಿ

ಕೇರಳಂನ ನೂತನ ಮುಖ್ಯಮಂತ್ರಿ ವಿ.ಡಿ.ಸತೀಶನ್‌ ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿ- ಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅಶೋಕ್ ಅವರು ಟ್ವೀಟ್‌ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಬಿಟ್ಟುಹೋಗಿರುವ ಆರ್ಥಿಕ ಬಳುವಳಿ ಏನು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನರಿಗಿದೆ. ರಾಜ್ಯದ ಸಾಲ ಎಷ್ಟು ಹೆಚ್ಚಾಗಿದೆ? ಸರ್ಕಾರದ ಖಜಾನೆಯ ನಿಜವಾದ ಸ್ಥಿತಿಗತಿ ಏನು? ಅವೈಜ್ಞಾನಿಕ ಯೋಜನೆಗಳು, ಮತಬ್ಯಾಂಕ್ ರಾಜಕಾರಣ ಮತ್ತು ದುಂದುವೆಚ್ಚಗಳಿಂದ ರಾಜ್ಯದ ಆರ್ಥಿಕತೆಗೆ ಎಷ್ಟು ಹಾನಿಯಾಗಿದೆ? ಮುಂದಿನ ಪೀಳಿಗೆಯ ಹೆಗಲ ಮೇಲೆ ಎಷ್ಟು ಸಾಲದ ಹೊರೆ ಹಾಕಲಾಗಿದೆ ಎಂದು ತಿಳಿಯಬೇಕಿದೆ. ಮುಚ್ಚಿಡಲು, ಮರೆಮಾಚಲು ಏನೂ ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ವಿಧಾನಸಭೆಯಲ್ಲಿ ಹಣಕಾಸು ಶ್ವೇತಪತ್ರ ಮಂಡಿಸಬೇಕು. ಸತ್ಯವನ್ನು ಹೊರಗೆ ಬರಲು ಬಿಡಬೇಕು. ಕರ್ನಾಟಕಕ್ಕೆ ಪಾರದರ್ಶಕತೆ ಬೇಕು. ಕನ್ನಡಿಗರಿಗೆ ಉತ್ತರದಾಯಿತ್ವ ಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ಸಿದ್ದರಾಮಯ್ಯ ಸರ್ಕಾರ ರಾಜ್ಯಕ್ಕೆ ಬಿಟ್ಟುಹೋಗಿರುವ ನಿಜವಾದ “ಸಾಕ್ಷಿಗುಡ್ಡೆ” ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆರ್. ಅಶೋಕ್ ಇ-ಖಾತಾ ದಂಧೆ ಕರ್ನಾಟಕ ರಾಜಕಾರಣ ಡಿ ಕೆ ಶಿವಕುಮಾರ್ ಸರ್ಕಾರ ಭಾರತ್ ಜೋಡೋ. ರಾಹುಲ್ ಗಾಂಧಿ ರಿಮೋಟ್ ಕಂಟ್ರೋಲ್ ಸರ್ಕಾರ ಸಿದ್ದರಾಮಯ್ಯ ಹಣಕಾಸು ಶ್ವೇತಪತ್ರ
Follow on Facebook Follow on Instagram
Share. Facebook Twitter WhatsApp Telegram
Previous Articleತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಓಮಿನಿ-ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!
Next Article “ನಾನು ಸಿಎಂ ಆದ್ರೆ…” – ಪತ್ರಕರ್ತನ ಕನಸಿನಲ್ಲಿ ಡಿಕೆ ಶಿವಕುಮಾರ್ ಬಿಚ್ಚಿಟ್ಟ ರಾಜಕೀಯ ಸತ್ಯಗಳು!
Times Of Bayaluseeme Staff
  • Website

Related Posts

ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

June 4, 2026

ಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ

June 4, 2026

ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಬರಬೇಕೇ? ಈ 3 ನಿಯಮಗಳು ಇಂದೇ ಪೂರ್ಣಗೊಳಿಸಿ!

May 31, 2026
Add A Comment
Leave A Reply Cancel Reply

Advertisement
Latest Posts

ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಚಿತ್ರದುರ್ಗ: ಜೂನ್ 5 ರಂದು ನಗರದ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ

“ನಾನು ಸಿಎಂ ಆದ್ರೆ…” – ಪತ್ರಕರ್ತನ ಕನಸಿನಲ್ಲಿ ಡಿಕೆ ಶಿವಕುಮಾರ್ ಬಿಚ್ಚಿಟ್ಟ ರಾಜಕೀಯ ಸತ್ಯಗಳು!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.