ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ನಾಯಿಗಳ ದಾಳಿಗೆ 500ಕ್ಕೂ ಹೆಚ್ಚು ನಾಟಿ ಕೋಳಿಗಳು ಬಲಿಯಾಗಿವೆ. ಗ್ರಾಮದ ರಂಗನಾಥ ಎಂಬುವವರ ಜಮೀನೊಂದರಲ್ಲಿ ಬಾಡಿಗೆ ಶೆಡ್ ಪಡೆದು ಸಾಕಿದ್ದ ನಾಟಿ ಕೋಳಿ ಫಾರ್ಮ್ಗೆ ಏಕಾಏಕಿ ನಾಯಿಗಳು ನುಗ್ಗಿ ದಾಳಿ ಮಾಡಿದ ಪರಿಣಾಮ 500ಕ್ಕೂ ಹೆಚ್ಚು ನಾಟಿ ಕೋಳಿಗಳು ಸಾವನ್ನಪ್ಪಿವೆ. ಇದರಿಂದಾಗಿ ರೈತ ರಂಗನಾಥ್ ಅವರಿಗೆ ಸುಮಾರು ಒಂದು ಲಕ್ಷ ರೂಪಾಯಿ ನಷ್ಟ ಉಂಟಾಗಿದ್ದು, ಘಟನೆ ಬಗ್ಗೆ ರಂಗನಾಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾನೆ. ಅಷ್ಟೇ ಅಲ್ಲದೆ ನಾಟಿಕೋಳಿ ಉದ್ಯಮವನ್ನೆ ನಂಬಿಕೊಂಡಿದ್ದ ರಂಗನಾಥ್ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



