ಜೈಪುರ: ರಾಜಸ್ಥಾನದ ಝಾಲಾವಾಡ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶುಕ್ರ ವಾರ ಪ್ರಾರ್ಥನೆಗೆಂದು ಸೇರಿದ್ದ ವೇಳೆ, ಶಿಥಿಲವಾಗಿದ್ದ ಶಾಲಾ ಕಟ್ಟಡ ಕುಸಿದು 7 ಮಕ್ಕಳು ಸಾವನ್ನಪ್ಪಿ, 28 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಝಾಲಾವಾಡ್‌ನ ಮನೋಹರ್ತನ ವಿಭಾಗದ ಪಿಪ್ಲೋಡಿ ಎಂಬಲ್ಲಿ ಶಾಲೆಯ 6 ಮತ್ತು 7ನೇ ತರಗತಿಯಿದ್ದ ಭಾಗ ಧರಶಾ ಹಿಯಾಗಿದೆ. ಕುಸಿದ ಕಟ್ಟಡದ ಕಾಂಕ್ರೀಟ್ ತುಂಡುಗಳು, ಇಟ್ಟಿಗೆಗಳ ಅವಶೇಷಗಳಡಿ 35ಕ್ಕೂ ಹೆಚ್ಚು ಮಕ್ಕಳು ಸಿಲುಕಿಕೊಂಡಿದ್ದರು. ಕೂಡಲೇ ಸ್ಥಳದಲ್ಲಿದ್ದ ಶಿಕ್ಷಕರು, ಪೋಷಕರು ಮತ್ತು ಸ್ಥಳೀಯರು ಸಾಧ್ಯವಾದಷ್ಟು ಜನರನ್ನು ಹುಡುಕಿ ಹೊರತೆಗೆದಿದ್ದಾರೆ.
ಕುಸಿದು ಬಿದ್ದ ಶಾಲಾ ಕಟ್ಟಡದ ಭಾಗ
‘ದುರ್ಘಟನೆಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಕಟ್ಟಡ ಶಿಥಿಲವಾಗಿದ್ದರೂ ಸರಿಪಡಿಸಿ ರಲಿಲ್ಲ’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳು ಕೂಡ ಘಟ ನೆಯ ಕೆಲ ಹೊತ್ತಿಗೂ ಮುನ್ನ ಕಟ್ಟಡ ಹಾಳಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



