ಜೈಪುರ: ಮಹಿಳೆಯೊಬ್ಬರಿಂದ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್ ದಯಾಳ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದಲ್ಲಿ ಫೋಕೋ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ. ಕ್ರಿಕೆಟ್ ಆಟಗಾರ್ತಿಯಾಗಿರುವ ಯುವತಿಯೊಬ್ಬರು ಜೈಪುರದ ಸಂಗನೇರ್ ಸರ್ಕಾರ್ ಪೊಲೀಸ್ ಠಾಣೆಗೆ ಯಶ್ ವಿರುದ್ಧ ದೂರು ನೀಡಿದ್ದಾರೆ. ‘2023ರಲ್ಲಿ ನನಗೆ 17 ವರ್ಷವಾಗಿದ್ದಾಗ ಯಶ್ ಅತ್ಯಾಚಾರ ಎಸಗಿದ್ದಾರೆ. ನನ್ನ ಕ್ರಿಕೆಟ್ ಬದುಕಿಗೆ ಸಹಾಯ ಮಾಡುತ್ತೇನೆ ಎಂಬ ಭರವಸೆ ನೀಡಿ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಈ ಏಪ್ರಿಲ್‌ನಲ್ಲಿ ಐಪಿಎಲ್‌ನಡೆಯುತ್ತಿದ್ದಾಗಲೂಜೈಪುರದಹೋಟೆಲ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ’ ಎಂದು ದೂರಿದ್ದಾರೆ.” ಆದರೆ ಈ ಬಗ್ಗೆ ದಯಾಳ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲೂ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



