ಮೊಳಕಾಲ್ಮೂರು : ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿಯ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ. ತಡರಾತ್ರಿ ಅತಿ ವೇಗವಾಗಿ ವಾಹನ ಸಂಚಾರ ಮಾಡುವ ವೇಳೆ ಆರೇಳು ವರ್ಷದ ಗಂಡು ಕರಡಿ ರಸ್ತೆ ದಾಟಲು ಮುಂದಾಗಿದೆ, ಈ ವೇಳೆ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟಿದೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಬೇಟಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಇದೇ ರಸ್ತೇಲಿ ಹಲವು ಬಾರಿ ಕಾಡು ಪ್ರಾಣಿಗಳು ವಾಹನ ಓಡಾಟಕ್ಕೆ ಸಿಲುಕಿ ಸಾವನ್ನಪ್ಪಿದ್ದು, ಈ ಸಂಬಂಧ ಅರಣ್ಯ ಇಲಾಖೆ ಯಾವ ಕ್ರಮ ಕೈಗೊಳ್ಳದೆ ಇರುವುದಕ್ಕೆ ಪ್ರಾಣಿ ಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



