ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ ಆರ್ಭಟ ತಿಂಗಳಾಂತ್ಯದವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ರಾಜ್ಯಾದ್ಯಂತ ಮಳೆಯಾರ್ಭಟ ಮುಂದುವರೆದಿದ್ದು, ಇನ್ನೂ 5 ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಮುಖ್ಯವಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಜುಲೈ 31ರ ವರೆಗೂ ಕರ್ನಾಟಕದಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನವೂ ಆರೆಂಜ್ ಅಲರ್ಟ್ ಇದ್ದು, ಜುಲೈ 31 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೂ ಮಳೆ ಆರ್ಭಟ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು , ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೂ ಜುಲೈ 30 ರವರೆಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ. ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದ್ದು, ನಂತರ ಮಳೆ ಪ್ರಮಾಣದಲ್ಲಿ ಇಳಿಕೆ ಆಗಲಿದೆ. ದಕ್ಷಿಣ ಕನ್ನಡ , ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 29 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜುಲೈ 30 ಹಾಗೂ ಜುಲೈ 31ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ಮಳೆ ಮುಂದುವರಿಕೆ
ಅಂತೆಯೇ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಹವಾಮಾನ ತಂಪಾಗಿದೆ. ವಾರಾಂತ್ಯ ಮತ್ತು ಮುಂದಿನ ವಾರದವರೆಗೂ ಇದೇ ಪ್ರವೃತ್ತಿ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗಿನ ತಾಪಮಾನ 22°C ಆಗಿದ್ದು, 78% ಆರ್ದ್ರತೆ ದಾಖಲಾಗಿದೆ. ಪಶ್ಚಿಮ-ನೈಋತ್ಯ ದಿಕ್ಕಿನಿಂದ ಗಂಟೆಗೆ 17 mph ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣ 100% ರಷ್ಟಿದ್ದು, ನಗರವು ಮೋಡ ಕವಿದ ವಾತಾವರಣದಲ್ಲಿದೆ.ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳ ನಿವಾಸಿಗಳು ಮುಂದಿನ ಕೆಲವು ದಿನಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಹಗುರದಿಂದ ಮಧ್ಯಮ ಮಳೆಯನ್ನು ನಿರೀಕ್ಷಿಸಬಹುದು. ಹಗಲಿನ ಗರಿಷ್ಠ ತಾಪಮಾನವು 24 ರಿಂದ 26°C ವರೆಗೆ ಉಳಿಯುವ ಸಾಧ್ಯತೆಯಿದೆ, ಆದರೆ ರಾತ್ರಿಯ ತಾಪಮಾನವು 20°C ರಷ್ಟಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



