ನಟಿ ರಮ್ಯಾ ನಟ ದರ್ಶನ್ ಕೇಸಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ದಿನ ರಮ್ಯಾ ಪೋಸ್ಟ್ ಮಾಡಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳು ಕಮೆಂಟ್ ಮಾಡಿದ ರೀತಿಗೆ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.‘ಎಲ್ಲ ಡಿ ಬಾಸ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಮ್ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ’ ಎಂದು ರಮ್ಯಾ ಅವರು ಬರೆದುಕೊಂಡಿದ್ದಾರೆ.
ದರ್ಶನ್ ಕೇಸ್ ಬಗ್ಗೆ ರಮ್ಯಾ ಹೇಳಿದ್ದೇನು..?
ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ರಮ್ಯಾ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮತ್ತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ಬಳಿಕ ರಮ್ಯಾ ಈ ರೀತಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಕಮೆಂಟ್ ಆಯ್ಕೆಯನ್ನು ಅವರು ಆಫ್ ಮಾಡಿದ್ದಾರೆ.
ಅತ್ಯಂತ ಕೊಳಕು ಭಾಷೆಯಲ್ಲಿ ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ. ಇದು ನನಗೊಬ್ಬಳಿಗೇ ಅಲ್ಲ, ಬೇರೆ ನಟ-ನಟಿಯರಿಗೂ ಹೀಗೆ ಆಗಿದೆ. ಅವರ ಪತ್ನಿ-ಮಕ್ಕಳನ್ನೂ ಬಿಟ್ಟಿಲ್ಲ. ನಾನು ಈ ಬಗ್ಗೆ ಕೇಸು ದಾಖಲಿಸಿದ್ದೇನೆ. ಹೀಗೆ ಟ್ರೋಲ್ ಮಾಡುವವರು ಬಹುತೇಕರು ಯುವ ವಯಸ್ಸಿನವರು, ಅವರು ತಮ್ಮ ಮೌಲ್ಯಯುತ ಸಮಯ, ವರ್ಷಗಳನ್ನು ಈ ರೀತಿ ನಿಷ್ಕಾರಣವಾಗಿ ಹಾಳು ಮಾಡುತ್ತಿದ್ದಾರೆ ಯಾರೂ ಕಾನೂನಿಗಿಂತ ಮಿಗಿಲು ಇಲ್ಲ.ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



