ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶ ಹಿನ್ನೆಲೆಯಲ್ಲಿ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ, ಇದೀಗ ಬೆಂಗಳೂರು ಕಮಿಷನರ್ ಗೆ ದೂರು ಕೊಟ್ಟಿದ್ದಾರೆ.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ, ನಾನೊಂದು ಸುಪ್ರೀಂಕೋರ್ಟ್ ಆದೇಶವನ್ನು ಶೇರ್ ಮಾಡಿದ್ದೆ. ಅದಕ್ಕೆ ಪ್ರತಿಯಾಗಿ ತುಂಬಾ ಕೆಟ್ಟದಾಗಿ ಮೆಸೇಜ್ ಹಾಕಿ, ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಬದಲು ನಿಮ್ಮನ್ನು ಕೊಲೆ ಮಾಡ್ಬೇಕಿತ್ತು. ನಿಮ್ಮನ್ನು ಅತ್ಯಾಚಾರ ಮಾಡ್ತೀವಿ ಎಂದೆಲ್ಲಾ ಸಂದೇಶ ಕಳುಹಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ದೂರು ದಾಖಲಿಸಿದ್ದೇನೆ. ಇಲ್ಲೇ ಸೈಬರ್ ಆಫೀಸ್ ಇದೆ. ಅಲ್ಲಿಗೆ ಫಾರ್ವರ್ಡ್ ಮಾಡುವುದಾಗಿ ಅವರು ಅವರು ಹೇಳಿದ್ದಾರೆ. 43 ಕಮೆಂಟ್ಗಳನ್ನು ಮೆನ್ಷನ್ ಮಾಡಲಾಗಿದೆ. ತುಂಬಾ ಬೆದರಿಕೆ ಹಾಗೂ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ಅವರ ಹೆಸರುಗಳಿವೆ. ಪವಿತ್ರಾ ಗೌಡ ಬಗ್ಗೆ ಮಾತನಾಡಿದರೆ ನಿಮಗೆ ಕೋಪ ಬರುತ್ತೆ. ಆದರೆ ನಮಗೆ ಅಶ್ಲೀಲ ಸಂದೇಶ ಕಳಿಸಿದರೆ ಕೋಪ ಬರಲ್ವಾ? ನಾವು ಮಹಿಳೆಯರು ಅಲ್ವಾ ಎಂದು ದರ್ಶನ್ ಅಭಿಮಾನಿಗಳನ್ನ ವಿರುದ್ಧ ಕಿಡಿಕಾರಿದರು.
ನಾನು ಯಾರಿಗೂ ಹೆದರುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಯಾರೂ ಬಹಿರಂಗವಾಗಿ ಮಾತನಾಡುತ್ತಿಲ್ಲ. ನನಗೇನೇ ಕೆಟ್ಟ ರೀತಿಯ ಪೋಸ್ಟ್ ಹಾಕಿ ಟ್ರೋಲ್ ಮಾಡುತ್ತಾರೆ. ಇನ್ನೂ ಸಾಮಾನ್ಯ ಹೆಣ್ಣು ಮಕ್ಕಳ ಗತಿಯೇನು? ರೇಣುಕಾಸ್ವಾಮಿ ಮಾಡಿರುವ ಮೆಸೇಜ್ ಗೂ ಈಗ ಕೆಲವರು ಮಾಡುತ್ತಿರುವ ಟ್ರೋಲ್ ಗೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದರ್ಶನ್ ಅವರು ಒಮ್ಮೆ ಅಭಿಮಾನಿಗಳಿಗೆ ಮನವರಿಕೆ ಮಾಡಬೇಕು. ಫ್ಯಾನ್ಸ್ಗೆ ಅವರು ಹೇಳಬೇಕು ಎಂದು ಹೇಳಿದ್ದಾರೆ.ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ನಗರ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರಮತ್ತೊಂದಡೆ ರಾಜ್ಯ ಮಹಿಳಾ ಆಯೋಗ ಅಶ್ಲೀಲವಾಗಿ ಸಂದೇಶ ಕಳಿಸಿದವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಕೊಳ್ಳಬೇಕು ಎಂದು ಕೋರಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



