ಬೆಂಗಳೂರು: RCB ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಆಗಿನ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಸೋಮವಾರ ಹಿಂಪಡೆದಿದೆ.ಆದಾಗ್ಯೂ, ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಕಾಶ್ ಕುಮಾರ್ ವಿಕಾಶ್ ಅವರ ಅಮಾನತು ಜಾರಿಯಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸರ್ಕಾರಿ ಆದೇಶದ ಪ್ರಕಾರ, ನ್ಯಾಯಾಂಗ ಆಯೋಗ ಮತ್ತು ಮ್ಯಾಜಿಸ್ಟೀರಿಯಲ್ ಸಮಿತಿ ಎರಡೂ ಕಾಲ್ತುಳಿತ ಘಟನೆಯ ತನಿಖೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವುದರಿಂದ ಮತ್ತು ಅಧಿಕಾರಿಗಳು ತಮ್ಮ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿರುವುದರಿಂದ ಅಮಾನತು ರದ್ದುಗೊಳಿಸಲಾಗಿದೆ.ಬಿ. ದಯಾನಂದ, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್. ತೆಕ್ಕಣ್ಣವರ, ಎಸಿಪಿ ಸಿ ಬಾಲಕೃಷ್ಣ, ಮತ್ತು ಇನ್ಸ್‌ಪೆಕ್ಟರ್ ಎ ಕೆ ಗಿರೀಶ್ ಅವರ ಅಮಾನತು ಹಿಂಪಡೆಯಲಾಗಿದೆ.ಜುಲೈ 1 ರಂದು, ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಬೆಂಗಳೂರು ಪೀಠವು ವಿಕಾಶ್ ಅವರ ಅಮಾನತು ರದ್ದುಗೊಳಿಸಿದೆ. ಆದರೆ ರಾಜ್ಯ ಸರ್ಕಾರ ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅವರ ಅಮಾನತು ಜಾರಿಯಲ್ಲಿದೆ.ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಮತ್ತು 56 ಜನ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



