ಬೆಂಗಳೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ ಒಂದರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಆಗಸ್ಟ್ 1ರಂದು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ “ಬ್ರಿಡ್ಜ್ ಟು ಬೆಂಗಳೂರು” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವರು.ಆಗಸ್ಟ್ 2ರಂದು ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ. ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣ ನಡೆಯಲಿದ್ದು, ಈ ಸಂಕಿರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಐಕ ರಾಹುಲ್ ಗಾಂಧಿ ಮತ್ತಿತರರ ವರಿಷ್ಠರು ಭಾಗವಹಿಸುವರು.
ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ ಸಿಎಂ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



