ಬೆಂಗಳೂರು: ಅಂಗನವಾಡಿ ಕಾರ್ಯ ಕರ್ತೆಯರಿಗೆ ಚುನಾವಣೆ ಕೆಲಸ ಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಹೇಳಿದರು.
ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘ ಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸುದ್ದಿಗಾರರ ಜತೆ ಮಾತನಾಡಿ, ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳುತ್ತಿರುವಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯ ದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆ ಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



