ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತರಾಗಿದ್ದು, ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು. ಖಚಿತ ಮಾಹಿತಿ ಆಧರಿಸಿ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಹುಳಿಮಾವು ಠಾಣೆಯ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಾಲಕನನ್ನು ಅಪಹರಣ ಮಾಡಿ ಆತನ ತಂದೆಗೆ ಕರೆ ಮಾಡಿದ್ದ ಆರೋಪಿಗಳು, 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



