ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರದ DRDO ಬಳಿ 2 ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.DRDO ಬಳಿ 2 ಚಿರತೆಗಳು ರಸ್ತೆ ದಾಟುತ್ತಿರುವ ದೃಶ್ಯವನ್ನು ವಾಹನ ಸವಾರರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ಚಿರತೆಗಳು ಸುಮಾರು ವರ್ಷಗಳಿಂದ DRDO ಸುತ್ತಮುತ್ತಲಲ್ಲಿ ಇದ್ದು, ಇದುವರೆಗೂ ಸ್ಥಳೀಯರಿಗೆ ಯಾವ ರೀತಿಯಲ್ಲಿ ತೊಂದರೆ ಉಂಟು ಮಾಡಿಲ್ಲ. ರಾತ್ರಿ ವೇಳೆ ಮಾತ್ರ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ನಾಯಕನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ಇನ್ನು ಚಿರತೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸಹ ಮೀನಮೇಷ ಎಣಿಸುತ್ತಿದ್ದು, ಚಿರತೆಗಳಿಂದ ಯಾವುದೇ ಅನಾಹುತ ನಡೆಯುವ ಮುನ್ನವೇ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



