ಮಂಡ್ಯ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಸಲ್ಲಿಸಿದ ದೂರಿನ ಆಧಾರದ ಮೇಲೆ ಕೇಂದ್ರ ಅಪರಾಧ ವಿಭಾಗವು ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೀಯ ಕಾಮೆಂಟ್ಗಳನ್ನು ಪೋಸ್ಟ್ ಮಾಡುವಲ್ಲಿ ನೇರವಾಗಿ ಭಾಗಿಯಾಗಿದ್ದ 11 ಜನರನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಅವರನ್ನೂ ಬಂಧಿಸಲಾಗುವುದು ಎಂದು ಹೇಳಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ನಟ ದರ್ಶನ್ ಅಭಿಮಾನಿಗಳು ತನಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು ಅಲ್ಲದೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಹಾಕಿದ್ದಾರೆ ಎಂದು ರಮ್ಯಾ ಜುಲೈ 28ರಂದು ಆಯುಕ್ತರನ್ನು ಭೇಟಿಯಾಗಿ 43 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ದೂರು ದಾಖಲಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



