ಮೈಸೂರು: ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಗೆ ಟಿಪ್ಪು ಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.
ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ. ಅಗತ್ಯಕ್ಕೆ ತಕ್ಕಂತೆ ನಿರೂಪಣೆ ಮಾಡಿಕೊಳ್ಳುವುದು ಸರಿಯಲ್ಲ. ಕೆಆರ್‌ಎಸ್ ಕಟ್ಟಿದ್ದು ಯಾರು, ಅದಕ್ಕೆ ಅಡಿಗಲ್ಲು ಹಾಕಿದ್ದು ಯಾರೆಂಬುದು ಎಲ್ಲರಿಗೂ ಗೊತ್ತಿದೆ.ಕನ್ನಂಬಾಡಿ ಅಣೆಕಟ್ಟೆ ಪ್ರಾರಂಭದಿಂದ ಕೊನೆಯವರೆಗೆ ಏನೆಲ್ಲ ಆಯಿತು, ಶ್ರಮವಹಿಸಿದ್ದು ಯಾರು ಎಂಬುದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ. ಸಚಿವ ಮಹದೇವಪ್ಪ ಇಲ್ಲದ ಇತಿಹಾಸದ ಬಗ್ಗೆ ಮಾತನಾಡುವ ಬದಲು ರಾಜ್ಯದಲ್ಲಿ ಜನರಿಗೆ ಒಳ್ಳೆಯ ಆಡಳಿತ ನೀಡಲಿ ಎಂದು ತಿರುಗೇಟು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



