ಯೂರಿಯ ರಸಗೊಬ್ಬರಕ್ಕಾಗಿ ನಗರದ ಡಿಸಿ ವೃತ್ತದ ಬಳಿ ಜಿಲ್ಲೆಯ ರೈತರ ಪ್ರತಿಭಟನೆ ನಡೆಸಿದರು. ಬೆಳೆಗೆ ಸರಿಯಾದ ರೀತಿಯಲ್ಲಿ ಗೊಬ್ಬರ ಸಿಗುತ್ತಿಲ್ಲ. ಬೆಳೆಗಳು ನಾಶ ಆಗುತ್ತಿವೆ. ಕೃಷಿ ಇಲಾಖೆಯಲ್ಲಿ ಕೇಳಿದ್ರೆ ಏನು ಉತ್ತರ ಸಿಗ್ತಿಲ್ಲ. ಈಗ ನಮಗೆ ಸಮರ್ಪಕವಾಗಿ ಯೂರಿಯ ಗೊಬ್ಬರ ಕೊಡಿ ಇಲ್ಲ ವಿಷ ಕೊಡಿ ಎಂದು ರೈತರು ಆಕ್ರೋಶ ಹೊರಹಾಕಿದರು. ಇದೆ ವೇಳೆ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ ರೈತರನ್ನು ಪೊಲೀಸರು ತಡೆದಿದ್ದಕ್ಕೆ ಪೊಲೀಸರ ಜೊತೆಗೆ ವಾಗ್ವಾದಕ್ಕೆ ಇಳಿದರು. ಕೂಡಲೇ ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದ ಅನ್ನದಾತರು, ಡಿಸಿ ಬದಲಿಗೆ ಸ್ಥಳಕ್ಕೆ ಬಂದ ಕೃಷಿ ಅಧಿಕಾರಿಗೆ ತರಾಟೆ ತೆಗೆದುಕೊಂಡರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



