ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ.ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು.ಹೊಸ ಸ್ಥಳದಲ್ಲಿ ಪರಿಶೀಲನೆ ಮತ್ತು ಭೂಮಿಯನ್ನು ಅಗೆಯುವ ಕಾರ್ಯವನ್ನು ಪ್ರಾರಂಭಿಸುವುದಾಗಿ ಎಸ್ಐಟಿಯ ಮೂಲಗಳು ತಿಳಿಸಿದ್ದವು.
ಪ್ರಕರಣದಲ್ಲಿ ಸಾಕ್ಷಿ-ದೂರುದಾರರು ತೋರಿಸಿರುವ ಒಟ್ಟು ಸ್ಥಳಗಳ ಪೈಕಿ ಈಗಾಗಲೇ 13 ಸ್ಥಳಗಳಲ್ಲಿ ಶೋಧ ಕಾರ್ಯ ಪೂರ್ಣಗೊಂಡಿದ್ದು, ಜುಲೈ 31 ರಂದು 6ನೇ ಸ್ಥಳದಲ್ಲಿ ಮಾತ್ರ ಮಾನವ ಅವಶೇಷಗಳು ಕಂಡುಬಂದಿವೆ. ಆಗಸ್ಟ್ 5 ರಂದು, ಎಸ್ಐಟಿ 11 ಮತ್ತು 12ನೇ ಸ್ಥಳದಲ್ಲಿ ಅಗೆದಿತ್ತು. ಆದರೆ, ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ.ಅಲ್ಲದೆ, ಸಾಕ್ಷಿ-ದೂರುದಾರ ಗುರುತಿಸಿದ್ದ 13ನೇ ಜಾಗವನ್ನು ಹೊರತುಪಡಿಸಿ, ಉಳಿದೆಲ್ಲ ಸ್ಥಳಗಳಲ್ಲಿ ಎಸ್ಐಟಿ ಶೋಧ ಕಾರ್ಯ ಪೂರ್ಣಗೊಳಿಸಿದೆ. ಇದೀಗ 15ನೇ ಸ್ಥಳ ಎಂದು ಗುರುತಿಸಿದ ಹೊಸ ಸ್ಥಳದಲ್ಲಿಯೂ ಶೋಧಕ್ಕೆ ಮುಂದಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







