ಹೊಳಲ್ಕೆರೆ : ಕ್ಷೇತ್ರದ ಜನ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾಲ್ಲೂಕಿನಾದ್ಯಂತ ಅಭಿವೃದ್ದಿ ಕಾಮಗಾರಿಗಳನ್ನುಮಾಡಿಸುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.ಭರಮಸಾಗರ ಹೋಬಳಿಯ ಹೆಗಡಿಹಾಳ್ ಗ್ರಾಮದಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ರಾ.ಹೆದ್ದಾರಿ-48 ರಿಂದ ವಯಾ ಹೆಗಡಿಹಾಳ್,ವಡ್ಡರಹಟ್ಟಿ, ಕೋಡಿರಂಗವ್ವನಹಳ್ಳಿವರೆಗೂ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿಲ್ಲ. ಆದರೂ ಸರ್ಕಾರದಲ್ಲಿ ಹೋರಾಟ ಮಾಡಿ ಅನುದಾನ ತಂದು ಪ್ರತಿನಿತ್ಯವೂ ಒಂದಲ್ಲ ಒಂದುಅಭಿವೃದ್ದಿ ಕೆಲಸಗಳು ನಡೆಯುವಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಐದು ನೂರು ಕೋಟಿರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದ್ದು, ಜೋಗ್ಫಾಲ್ಸ್ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ಪೂರೈಕೆಯಾಗಲಿದೆ. ಇದರಿಂದ ರೈತರಿಗೆ ಇನ್ನು ಐವತ್ತು ವರ್ಷಗಳ ಕಾಲ ಕರೆಂಟ್ ಸಮಸ್ಯೆಯಾಗುವುದಿಲ್ಲವೆಂದು ಹೇಳಿದರು.
ಭರಮಸಾಗರದಲ್ಲಿ ಮೊದಲ ಬಾರಿಗೆ ಶಾಸಕನಾಗಿದ್ದಾಗಲೆ ಪ್ರಥಮ ದರ್ಜೆ ಕಾಲೇಜು, ಐಟಿಐ. ಕಾಲೇಜು ಕಟ್ಟಿಸಿದ್ದೇನೆ. ಬಡವರಿಗೆನಿವೇಶನ ಕೂಡ ವಿತರಿಸಲಾಗಿದೆ. ಅಧಿಕಾರ ಬಹಳ ದಿನ ಇರಲ್ಲ. ಇದ್ದಷ್ಟು ದಿನ ಹತ್ತಾರು ಜನರಿಗೆ ಒಳ್ಳೆಯದು ಮಾಡಬೇಕೆನ್ನುವುದುನನ್ನ ಉದ್ದೇಶ. ಸಾರ್ವಜನಿಕ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡಿದ್ದೇನೆ. ಭದ್ರಾ ಜಲಾಶಯದಿಂದ ತಾಲ್ಲೂಕಿನ 37ಕೆರೆಗಳಿಗೆ ಇನ್ನು ಮೂರು ತಿಂಗಳೊಳಗೆ ನೀರು ತುಂಬಿಸುವ ಜವಾಬ್ದಾರಿ ನನ್ನದು. ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರುತಂದು ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ಕ್ಷೇತ್ರದಲ್ಲಿರುವಎಲ್ಲಾ ಜಾತಿ ಧರ್ಮದ ಜನರನ್ನು ಗೌರವವಾಗಿ ಕಾಣುತ್ತಿದ್ದೇನೆಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ, ಭರಮಸಾಗರ ಬಿಜೆಪಿ. ಮಂಡಲ ಅಧ್ಯಕ್ಷ ಶೈಲೇಶ್, ಗ್ರಾಮ ಪಂಚಾಯಿತಿ ಸದಸ್ಯರಾದರಾಜಶೇಖರಯ್ಯ, ರಾಜಣ್ಣ, ನಾಗೇಂದ್ರಪ್ಪಡಿ.ಎಸ್.ಪ್ರವೀಣ್ಕುಮಾರ್, ಮಂಜುನಾಥ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕಲ್ಲೇಶ್, ಬಸಣ್ಣ, ಮಂಜಣ್ಣ ಹಾಗೂ
ಗ್ರಾಮದ ಪ್ರಮುಖರು ಈ ಸಂದರ್ಭದಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



