ಬೆಂಗಳೂರು: ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಷಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಳೆದ ಆ. 10 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭ ನಡೆದದನ್ನು ಇಲ್ಲಿ ಸ್ಮರಿಸಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







