ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಡಾ.ಎಸ್.ಆಕಾಶ್ತಿಳಿಸಿದ್ದಾರೆ.79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗ್ರಾಮೀಣ ಜನರಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಹೆಚ್ಚಿನ ಅರಿವು ಮೂಡಿಸುವ ಉದ್ದೇಶದೊಂದಿಗೆ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಆಚರಣೆ ಎಂಬ ಘೋಷವಾಕ್ಯದಡಿ ಆಗಸ್ಟ್ 08ರಿಂದ ಅಭಿಯಾನ ಪ್ರಾರಂಭವಾಗಿದ್ದು, ಆಗಸ್ಟ್ 15 ರವರೆಗೆ ಅಭಿಯಾನ ನಡೆಯಲಿದೆ.
ಈ ಅಭಿಯಾನದ ಅಡಿಯಲ್ಲಿ ಗ್ರಾಮ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಸುಜಲ್ ಗ್ರಾಮ ಪ್ರತಿಜ್ಞೆಗಳು, ಸಮುದಾಯ ಶುಚಿತ್ವ ಅಭಿಯಾನಗಳು, ವಾಶ್ ಆಸ್ತಿಗಳು ಶುಚಿಗೊಳಿಸುವಿಕೆ, ಅರಿವು ಮೂಡಿಸುವ ಚಟುವಟಿಕೆಗಳು, ಜಲ ಸಂರಕ್ಷಣೆ ಮತ್ತು 2025ರ ಆಗಸ್ಟ್ 15ರಂದು ಅಮೃತ್ ಸರೋವರಗಳು, ಸಾರ್ವಜನಿಕ ಸ್ಥಳಗಳು ಇತ್ಯಾದಿ ಪ್ರಮುಖ ವಾಶ್ ಮೂಲಸೌಕರ್ಯ ಸ್ಥಳಗಳಲ್ಲಿ ಧ್ವಜಾರೋಹಣ ಸಮಾರಂಭ ಆಯೋಜನೆ ಮಾಡುವುದು.ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಅಭಿಯಾನದಲ್ಲಿ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಹಾಗೂ ಸ್ಥಳೀಯ ಸಂಸ್ಥೆಗಳು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು, ಸ್ವ-ಸಹಾಯ ಸಂಘದ ಗುಂಪುಗಳು, ಪಂಚಾಯತ್ ರಾಜ್ ಸಂಸ್ಥೆಗಳು, ಶಾಲಾ ಮಕ್ಕಳು, ಸ್ವಯಂ ಸೇವಕರು ಮತ್ತು ಮುಂಚೂಣಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಸಕ್ರಿಯಾಗಿ ಪಾಲ್ಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು.
ಅಭಿಯಾನದ ಅಂಗವಾಗಿ ಅಧಿಕಾರಿಗಳು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸಮುದಾಯದ ಸದಸ್ಯರು ಮತ್ತು ಶಾಲಾ ಮಕ್ಕಳು ಸೇರಿ ಸ್ವಚ್ಛ ಸುಜಲ್ ಗ್ರಾಮ ಪ್ರತಿಜ್ಞೆ ವಿಧಿ ಸ್ವೀಕಾರ ಮಾಡುವುದು. ಸಮುದಾಯದ ಶುಚಿತ್ವ ಅಭಿಯಾನ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಅರಿವು ಮೂಡಿಸುವ ಚಟುವಟಿಕೆಗಳು, ಚರಂಡಿಗಳ ಸ್ವಚ್ಛತೆ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯ ಅಭಿಯಾನ ಹಮ್ಮಿಕೊಳ್ಳವುದು. ವಾಶ್ ಮೂಲ ಸೌಕರ್ಯ ಶುಚಿತ್ವ ದಿನ, ಜೆಜೆಎಂ ಮೂಲ ಸೌಕರ್ಯದ ಮೇಲೆ ವಿಶೇಷ ಗಮನಹರಿಸುವುದು. ಸ್ವಚ್ಛತಾ ಸಂವಾದ ಮತ್ತು ಅರಿವು ದಿನ ಆಯೋಜಿಸುವುದು ಹಾಗೂ ಆಗಸ್ಟ್ 15ರಂದು ವಾಶ್ ಮೂಲ ಸೌಕರ್ಯ ಸಾರ್ವಜನಿಕ ಸ್ಥಳಗಳಾದ ಗ್ರಾಮ ಪಂಚಾಯತ್ ಕಟ್ಟಡ ಮತ್ತು ಇತರೆ ಸರ್ಕಾರಿ ಕಟ್ಟಡಗಳು, ಅಮೃತ್ ಸರೋವರಗಳು ಇತ್ಯಾದಿಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಗುರುತಿಸಲಾದ ಸ್ಥಳಗಳಲ್ಲಿ ಧ್ವಜಾರೋಹಣ ನೆರವೇರಿಸುವುದು. ಸ್ವಚ್ಛತಾ ಚಾಂಪಿಯನ್ ಮತ್ತು ಸ್ವಯಂ ಸೇವಕರ ಕೊಡುಗೆಗಳನ್ನು ಗುರುತಿಸಿ ಸನ್ಮಾನಿಸುವುದು. ಈ ಅಭಿಯಾನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಂಜೀವಿನಿ ಯೋಜನೆಯ ಸ್ವ ಸಹಾಯ ಸಂಘದ ಸದಸ್ಯರು, ಯುವಕರು, ಗ್ರಾಮಸ್ಥರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







