ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿ ರುವ ಆರೋಪದ ಹಿನ್ನೆಲೆಯಲ್ಲಿ ರಚಿಸಿದ್ದ ವಿಶೇಷ ತನಿಖಾ ತಂಡ ಹನ್ನೆರಡು ಕಡೆ ಶೋಧನೆ ನಡೆಸಿದ್ದು, ಹದಿಮೂರನೇ ಕಡೆ ಯೂ ಮೃತದೇಹದ ಅವಶೇಷಪತ್ತೆಯಾಗ ದಿದ್ದರೆ ಎಸ್ಐಟಿ ಶೋಧನೆ ನಿಲ್ಲಿಸಬೇ ಎಂದು ಸುಳಿವನ್ನು ವುಂಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ಹೂತಿಡ ಲಾಗಿದೆ ಎಂದು ಹೇಳಲಾಗಿರುವ ಶವಗಳ ಶೋಧ ಅಥವಾ ಧರ್ಮಸ್ಥಳ ಕ್ಷೇತ್ರದ ಕುರಿತು ಯಾರೊಬ್ಬರೂ ಪ್ರತಿಕ್ರಿಯೆ ನೀಡಬಾರದು. ಈ ವಿಚಾರದಲ್ಲಿ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಸೇರಿ ಯಾರೊಬ್ಬರೂ ಭಾವನಾತ್ಮಕ ವಾಗಿ ಹೇಳಿಕೆ ನೀಡಬಾರದು ಎಂದೂ ಇದೇ ವೇಳೆ ತಾಕೀತು ಮಾಡಿದರು ಎಂದು ಮೂಲಗಳು ಹೇಳಿವೆ.
ಧರ್ಮಸ್ಥಳದಲ್ಲಿ ಇನ್ನೆಷ್ಟು ಗುಂಡಿ ಅಗೆಯುತ್ತೀರಿ..? ಬಿಜೆಪಿ ಆಕ್ರೋಶ
ಧರ್ಮಸ್ಥಳ ಗ್ರಾ ಮದಲ್ಲಿ ಆಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೋ ಅನಾ ಮಿಕ ಹೇಳಿದ ಎಂದು ಇನ್ನೆಷ್ಟು ಗುಂಡಿ ಅಗೆಯುತ್ತೀರಿ? ಈವರೆಗೆ ಅಗೆಯಲಾಗಿರುವ ಗುಂಡಿಯಲ್ಲಿ ಏನು ಸಿಕ್ಕಿದೆ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸುವಂತೆ ಬಿಜೆಪಿ ಆಗ್ರಹಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







