ಬೆಂಗಳೂರು: ಆರು ವರ್ಷಗಳಿಂದ ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸದ ರಾಜ್ಯದ 10 ರಾಜಕೀಯ ಪಕ್ಷಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕ ಪ್ರಾತಿನಿಧ್ಯ ಕಾಯ್ದೆ 1951ರ ಸೆಕ್ಷನ್ 29ಎ ಅಡಿ ರಾಜಕೀಯ ಪಕ್ಷಗಳು ನೋಂದಾಯಿಸಿವೆ. ಆಯೋಗ ದಲ್ಲಿ ನೋಂದಣಿ ಮಾಡಿದ ಬಳಿಕ ಆದಾಯ ತೆರಿಗೆ ವಿನಾಯಿತಿ, ಸ್ಟಾರ್ ಪ್ರಚಾರಕರ ನಾಮನಿರ್ದೇಶನ ಸೇರಿ ಅನೇಕ ಪ್ರಯೋಜನಗಳಿಗೆ ಅರ್ಹವಾಗಿವೆ. ಕಾಯ್ದೆಯಡಿ ಚುನಾವಣೆಗಳಲ್ಲಿ ಭಾಗವಹಿಸಬೇಕು. ಆದರೂ 2019ರಿಂದ ಕಳೆದ 6 ವರ್ಷಗಳಿಂದ ಕರ್ನಾಟಕದ 10 ರಾಜಕೀಯ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಶೋಕಾಸ್ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







