ಬೆಂಗಳೂರು: ರಾಜಕೀಯದಲ್ಲಿ ಯಾವಾಗಲೂ ಹಗೆ ಇದ್ದೇ ಇರುತ್ತದೆ. ನಾವು ಹುಷಾರಾಗಿ ಮತ್ತು ಬಿಗಿಯಾಗಿ ಇರಬೇಕಾಗುತ್ತದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು. ರಾಜಕೀಯದಲ್ಲಿ ಯಾವಾಗಲೂ ಹೀಗೇ ಇರುವುದಿಲ್ಲ. ವಾಪಸ್ ಆಗಲೂಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಸಂಬಂಧ ಸ್ವತಃ ಅವರೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಾರೆ. ರಾಜಣ್ಣ ಅವರು “ಪಿತೂರಿ”ಗೆ ಬಲಿಯಾಗಿದ್ದಾರೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಹೇಳಿದರು.
ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರುತ್ತದೆ. ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ದೆಹಲಿಗೆ ರಾಜಣ್ಣ ಹೋಗ್ತೀನಿ ಎಂದು ಹೇಳಿದ್ದಾರೆ. ಆಗ ಎಲ್ಲವೂ ಸರಿ ಹೋಗಬಹುದು ಎಂದು ತಿಳಿಸಿದ್ದಾರೆ.ಪಕ್ಷದ ನಾಯಕರಿಗೆ ಸ್ಪಷ್ಟನೆ ನೀಡುತ್ತಾರೆ. ಮುಂದೆ ಇದನ್ನು ತಿಳಿ ಮಾಡೋಣ. ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲ. ನಾಗೇಂದ್ರ ಘಟನೆಯೇ ಬೇರೆ ಈ ಘಟನೆಯೇ ಬೇರೆ. ಮುಂದಿನ ದಿನಗಳಲ್ಲಿ ರಾಜಣ್ಣ ಅವರೇ ಇದರ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







