ನವದೆಹಲಿ: ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.ಪ್ರಧಾನಿ ಮೋದಿಯವರು ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಸತತ 12ನೇ ಭಾಷಣ ಮಾಡುತ್ತಿದ್ದಾರೆ. ಈ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಥೀಮ್ ‘ನಯಾ ಭಾರತ್’ ಆಗಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯತ್ತ ದೇಶವನ್ನು ಮುನ್ನಡೆಸುವ ಗುರಿ ಹೊಂದಲಾಗಿದೆ.ಪ್ರಧಾನಿ ಮೋದಿಯವರನ್ನು ಹಿರಿಯ ಸರ್ಕಾರ ಮತ್ತು ಸೇನಾ ಅಧಿಕಾರಿಗಳು ಬರಮಾಡಿಕೊಳ್ಳುವುದರೊಂದಿಗೆ ಸಮಾರಂಭ ಪ್ರಾರಂಭವಾಗಿದೆ. ಬಳಿಕ ಸೇನಾ ಗೌರವ ವಂದನೆ ಸ್ವೀಕಾರ ನಡೆಯಿತು.ಈ ಸಲ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವಾಲಯದಿಂದ ವಿವಿಧ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 210 ಪಂಚಾಯತ್ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.ಈ ವರ್ಷದ ವಿಶೇಷ ತಮ್ಮ ಗ್ರಾಮ ಪಂಚಾಯತ್ಗಳಲ್ಲಿ ಸುಧಾರಣೆಗಳನ್ನು ತಂದಿರುವ ನಾಯಕರು ಭಾಗಿಯಾಗಿದ್ದು, ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪಂಚಾಯತ್ ನಾಯಕಿಯರು ಸೇರಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







