ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಜೂನ್ 25 ರಿಂದ ಜುಲೈ 15 ರವರೆಗೆ ಐಎಸ್ಎಸ್ಗೆ ಆಕ್ಸಿಯಮ್ – 4 ವಾಣಿಜ್ಯ ಕಾರ್ಯಾಚರಣೆಯ ಭಾಗವಾಗಿದ್ದ ಶುಕ್ಲಾ ಅವರು ಇಂದು ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಅವರು ತಮ್ಮೊಂದಿಗೆ ಬಾಹ್ಯಾಕಾಶಕ್ಕೆ ಕೊಂಡೊಯ್ದ ತ್ರಿವರ್ಣ ಧ್ವಜವನ್ನು ಮೋದಿಗೆ ಉಡುಗೊರೆಯಾಗಿ ನೀಡಿದರು.ಇಸ್ರೋ ಗಗನಯಾತ್ರಿಯ ಜಾಕೆಟ್ ಧರಿಸಿದ್ದ ಶುಕ್ಲಾ ಅವರನ್ನು ಪ್ರಧಾನಿ ಮೋದಿ ಬೆಚ್ಚಗಿನ ಅಪ್ಪುಗೆಯೊಂದಿಗೆ ಸ್ವಾಗತಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







