ಬೆಂಗಳೂರು: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರೌಡ ಶಾಲೆಗಳ 385 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಶಾಲಾ ಕೊಠಡಿಗಳ ದುರಸ್ತಿ ಹಾಗೂ ಖಾಲಿ ಇರುವ ಶಾಲಾ ಶಿಕ್ಷಕರ ಭರ್ತಿ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, 2024-25 ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿನ 13,880 ಕೊಠಡಿಗಳ ದುರಸ್ತಿಗೆ ರೂ 15129.66 ಲಕ್ಷ ಅನುದಾನ ಮಂಜೂರಾಗಿರುತ್ತದೆ.
ಕೆ ಕೆ ಆರ್ ಡಿ ಬಿ ವತಿಯಿಂದ 2024-25 ನೇ ಸಾಲಿನಲ್ಲಿ ಕೊಠಡಿಗಳ ದುರಸ್ತಿ ಕಾಮಗಾರಿಗೆ 5284.74 ಲಕ್ಷ ಅನುದಾನ ಮಂಜೂರಾಗಿರುತ್ತದೆ. ಹಾಗೆಯೇ 2022-23 ರಿಂದ 2024-25 ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿನ ಹೊಸ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾದ ಅನುದಾನ ಒಟ್ಟು 91554.83 ಲಕ್ಷವಾಗಿರುತ್ತದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಲ್ಯಾಣ ಕರ್ನಾಟಕಕ್ಕೆ 2022-23 ರಿಂದ 2024-25 ನೇ ಸಾಲಿನವರೆಗೆ 5251.78 ಲಕ್ಷ ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿರುತ್ತವೆ ಎಂದರು
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟಾರೆಯಾಗಿ 50,104 ಹುದ್ದೆಗಳು ಖಾಲಿಯಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 34027 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹಾಗೆಯೇ ಸರ್ಕಾರಿ ಪ್ರೌಢಶಾಲೆಗಳಲ್ಲಿ 11586 ಖಾಲಿ ಹುದ್ದೆಯಿದ್ದು 9499 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಸರ್ಕಾರವು ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ಕುರಿತಂತೆ ಸ್ಪಷ್ಟ ನಿರ್ಣಯ ಕೈಗೊಂಡ ನಂತರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದೆಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







