ಚಿತ್ರದುರ್ಗ: ರಾಜ್ಯಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜಿಲ್ಲೆಯ ಕೆಲ ಹಳ್ಳಿಗಳ ರಸ್ತೆಗಳು ಕಳಪೆ ಕಾಮಗಾರಿಯ ಅನಾವರಣ ಮಾಡಿದ್ರೆ, ಇನ್ನು ಕೆಲವು ಹಳ್ಳಿಗಳಲ್ಲಿ ಜನಪ್ರತಿನಿಧಿಗಳ ಅಭಿವೃದ್ಧಿ ಶೂನ್ಯದ ಬಗ್ಗೆ ಪ್ರದರ್ಶನ ಮಾಡಿವೆ. ಹೌದು… ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಿಂದ ಜೋಗಿಬೋರನಹಟ್ಟಿ, ಚಿಪ್ಪಿನಕೆರೆ, ಚಿಕ್ಕಗೊಂಡನಹಳ್ಳಿ ಮುಖಾಂತರ ರಾಷ್ಟ್ರೀಯ ಹೆದ್ದಾರಿ 13ಕ್ಕೆ ಸೇರುವ ಮಾರ್ಗದ ರಸ್ತೆ ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟಿದೆ. ಈ ಮಾರ್ಗದಲ್ಲಿ ದಿನಕ್ಕೆ ನೂರಾರು ಮಂದಿ ವಾಹನ ಸವಾರರು ಜೊತೆಗೆ ಶಾಲಾ ಮಕ್ಕಳು, ವಯೋವೃದ್ಧರು ಸೇರಿದಂತೆ ರೈತರು ತಮ್ಮ ಜಮೀನುಗಳಿಗೆ ಓಡಾಡುತ್ತಾರೆ. ಆದರೆ ಮಳೆಯಿಂದಾಗಿ ಈಗ ರಸ್ತೆ ಸಂಪೂರ್ಣ ಕೆಸರು ಮಾಯವಾಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಈ ಬಗ್ಗೆ ಗ್ರಾಮಸ್ಥರು ಬಹಳಷ್ಟು ಬಾರಿ ಸಂಬಂಧಪಟ್ಟ ಸ್ಥಳೀಯ ಶಾಸಕರು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೂ ತಂದರು ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ರಸ್ತೆ ಸರಿಪಡಿಸುವ ಬಗ್ಗೆ ಒಂದು ವಾರದಲ್ಲಿ ಅಧಿಕಾರಿಗಳು, ಶಾಸಕರು ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುವುದಾಗಿ ಮಜುರೆ ಹಟ್ಟಿಗಳ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.ಜೊತೆಗೆ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ, ವಿಡುಪನಕುಂಟೆ ಗ್ರಾಮಗಳಲ್ಲಿ ಸಹ ಮಳೆಯಿಂದಾಗಿ ಇಡೀ ಊರಿನ ರಸ್ತೆಗಳು ಸಂಪೂರ್ಣ ಕೆಸರಿನಿಂದ ಕೂಡಿವೆ. ಗ್ರಾಮದಲ್ಲಿ ಓಡಾಡಲು ಆಗದಂತೆ ದುಸ್ಥಿತಿ ನಿರ್ಮಾಣ ಆಗಿದೆ. ಇನ್ನು ಪಂಚಾಯಿತಿ ಸದಸ್ಯರು ಪಂಚಾಯಿತಿ ಕಡೆಯಿಂದ ಚೆನ್ನಾಗಿರುವ ರಸ್ತೆಗಳಿಗೆ ಮಣ್ಣು ಹಾಕಿಸಿ ಇರುವ ರಸ್ತೆಗಳನ್ನು ಹಾಳು ಮಾಡಿ ಹಣ ಗಳಿಸುತ್ತಾರೆ. ಸರಿಯಾದ ರೀತಿಯಲ್ಲಿ ಕೆಲಸ ಮಾಡಿಸದೆ ಕಳಪೆ ಕಾಮಗಾರಿ ಮಾಡುತ್ತಾರೆ. ಪಂಚಾಯಿತಿ ಸದಸ್ಯರು ನರೇಗಾ ಯೋಜನೆಯಡಿ ಸರಿಯಾದ ಕೆಲಸ ಮಾಡಿಸುತ್ತಿಲ್ಲ.ಒಂದೇ ದಿನಕ್ಕೆ ಎಲ್ಲಾ ಕೆಲಸ ಮುಗಿಸಿ ಬಿಲ್ ಪಡೆದು ಸುಮ್ನೆ ಆಗ್ತಾರೆ. ಇನ್ನು ಕೆಲ ಗ್ರಾಮದಲ್ಲಿ ಕೆಲವೆಡೆ ಸಿಸಿ ರಸ್ತೆ ಮಾಡಿಸುವಂತೆ ಹಲವು ಬಾರಿ ಪಂಚಾಯಿತಿ ಸದಸ್ಯರು ಹಾಗೂ ಪಿಡಿಒಗಳ ಗಮನಕ್ಕೆ ತಂದಿದ್ದೇವೆ. ಆದರೆ ಅವರು ಶಾಸಕರ ಗಮನಕ್ಕೆ ತರದೇ ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಈಗ ರಸ್ತೆಗಳು ಮಳೆ ನೀರಿಂದ ತುಂಬಿವೆ. ನಾವು ಈಗ ಓಡಾಡುವುದು ಹೇಗೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







