ಬೆಳ್ತಂಗಡಿ: ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದರೂ ನಿನ್ನೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಪೊಲೀಸರು ಹೋದ ಘಟನೆ ನಡೆದಿದೆ.ಈ ಸಂದರ್ಭದಲ್ಲಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಹೊರಗೆ ಹೈಡ್ರಾಮಾ ನಡೆದಿದ್ದು, ಕೊನೆಗೆ ಪೊಲೀಸರ ಜೊತೆ ತಮ್ಮ ಖಾಸಗಿ ಕಾರಿನಲ್ಲಿಯೇ ಮಹೇಶ್ ತಿಮರೋಡಿ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದರು. ಈ ಸಂದರ್ಭದಲ್ಲಿ ಮಹೇಶ್ ತಿಮರೋಡಿ ಅವರ ಬೆಂಬಲಿಗರು ಸಹ ಇದ್ದರು.
ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೂಡ ಮಹೇಶ್ ತಿಮರೋಡಿ ಮೇಲಿದೆ.ಕಾರಿನಲ್ಲಿ ಕುಳಿತು ಮಾಧ್ಯಮ ಪ್ರತಿನಿಧಿಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದ ತಿಮರೋಡಿ, ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ ಅದಕ್ಕೆ ಸರ್ಕಾರ ಮತ್ತು ಬಿಜೆಪಿಯವರೇ ಕಾರಣ, ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ನೀಡುತ್ತೇನೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







