ಶಿವಮೊಗ್ಗ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಶೇ.40ಕ್ಕಿಂತ ಹೆಚ್ಚು ಕಮಿಷನ್ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಆರೋಪ ಮಾಡಿದ್ದಾರೆ.ಹಿಂದಿನ ಸರ್ಕಾರ ಇದ್ದಾಗ ಕೆಂಪಣ್ಣನವರ ಆರೋಪಕ್ಕೆ ವಿರೋಧ ಮಾಡಿದ್ದೆವು. ಆ ಆರೋಪವನ್ನು ಉಪಯೋಗಿಸಿ ಈ ಸರ್ಕಾರ ಅಧಿಕಾರಕ್ಕೆ ಬಂತು. ಆದರೆ, ಈಗ ಅದಕ್ಕಿಂತ ಹೀನಾಯ ಪರಿಸ್ಥಿತಿ ಬಂದಿದೆ ಎಂದರು. 20% ಕಮಿಷನ್ ನೀಡಿದ ಕೆಲವರಿಗೆ ಬಿಲ್ಗಳು ಆಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಸಿಎಂಗೆ ಹಲವು ಭಾರಿ ಮನವಿ ಮಾಡಿದ್ದೇವೆ. ಕೂಡಲೇ ಅವರು ಎಲ್ಲಾ ಬಿಲ್ ಕ್ಲಿಯರ್ ಮಾಡಬೇಕು ಎಂದು ಒತ್ತಾಯಿಸಿದರು.ಕೆಲವೊಮ್ಮೆ ಅನುದಾನ ತಡವಾದರೂ ಕೆಲಸ ಮಾಡುತ್ತೇವೆ. ಆದರೆ, ಕೆಲಸ ಮಾಡಿದ ಮೇಲೆ ಕೆಲಸ ಮಾಡಿಸಿದ ಅಧಿಕಾರಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಆಗ ಗುತ್ತಿಗೆದಾರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇದರಲ್ಲಿ 100ಕ್ಕೆ ನೂರು ಕಾರ್ಯಪಾಲಕ ಅಭಿಯಂತರರದ್ದೇ ತಪ್ಪಾಗಿರುತ್ತದೆ ಎಂದು ದೂರಿದರು.
ನಗರಾಭಿವೃದ್ಧಿ ಸಚಿವಬೈರತಿ ಸುರೇಶ್ ಕೆಲವು ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಟೆಂಡರ್ ಮಾಡುತ್ತಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯ ಟೆಂಡರ್ ಬೆಂಗಳೂರಲ್ಲಿ ಆಗುತ್ತೆ. ಭೈರತಿ ಸುರೇಶ್ರ ಆಯ್ದ ಗುತ್ತಿಗೆದಾರರಿಗೆ ಕಾಂಟ್ಯಾಕ್ಟ್ ಹೋಗುತ್ತಿದೆ. ನಗರಾಭಿವೃದ್ಧಿ ಇಲಾಖೆಯಲ್ಲಷ್ಟೇ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







