ಚಿತ್ರದುರ್ಗ: ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕರಿಗೆ ಐದು ಲಕ್ಷ ರೂ.ಗಳನ್ನು ನೀಡುವುದಾಗಿ ಬಿಜೆಪಿಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕೋಮು ಪ್ರಚೋದನೆ ಮಾತುಗಳನ್ನಾಡಿರುವುದನ್ನು ಹಿರಿಯ ನ್ಯಾಯವಾದಿ ಮಹಮದ್ಸಾಧಿಕ್ವುಲ್ಲಾ ಖಂಡಿಸಿದ್ದಾರೆ.ಶಾಂತಿಯ ಸಂಕೇತ ಬುದ್ದ, ಸಮಾನತೆಯ ಹರಿಕಾರ ಬಸವಣ್ಣನವರ ನಾಡಿನಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಇಂತಹಹೇಳಿಕೆಗಳನ್ನು ನೀಡುತ್ತಿರುವುದರಿಂದ ಜಾತಿ ಧರ್ಮಗಳ ನಡುವೆ ಅಶಾಂತಿ ಉಂಟು ಮಾಡಿದಂತಾಗುತ್ತದೆ. ಸರ್ವ ಜನಾಂಗದಶಾಂತಿಯ ತೋಟ ಭಾರತದಲ್ಲಿ ಕುಚೋದ್ಯದ ಮಾತುಗಳನ್ನಾಡುವ ಬಸವನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನದಲ್ಲಿರಲುಯೋಗ್ಯನಲ್ಲ. ಸಿದ್ದರಾಮ್ಯಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದೆ ಇಂತಹ ಸಂವಿಧಾನ ವಿರೋಧಿ ಮಾತುಗಳನ್ನಾಡುವುದು ತರವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವಡಾ.ಜಿ.ಪರಮೇಶ್ವರ್ರವರು ಈತನ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಮಹಮದ್ ಸಾಧಿಕ್ವುಲ್ಲಾಒತ್ತಾಯಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







