ಲೋಕೇಶ್ ಕನಕರಾಜ್ ನಿರ್ದೇಶನದ ರಜನಿಕಾಂತ್ ನಟನೆಯ ಕೂಲಿ ಚಿತ್ರವು ದೇಶೀಯ ಗಲ್ಲಾ ಪೆಟ್ಟಿಗೆಯಲ್ಲಿ 222.5 ಕೋಟಿ ಗಳಿಸುವ ಮೂಲಕ ಮೊದಲ ವಾರವನ್ನು ಯಶಸ್ವಿಯಾಗಿ ಮುಗಿಸಿದೆ. ಬಿಡುಗಡೆಯಾದ ಆರಂಭಿಕ ವಾರದಲ್ಲಿ ದಾಖಲೆಯ ಗಳಿಕೆ ಕಂಡ ನಂತರ ಚಿತ್ರದ ಕಲೆಕ್ಷನ್ ಕೊಂಚ ಕುಸಿತ ಕಂಡಿದೆ.ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಚಿತ್ರವು ಬಿಡುಗಡೆಯಾದ 7ನೇ ದಿನದಂದು ಸುಮಾರು 6.5 ಕೋಟಿ ಗಳಿಸಿದೆ. ಮಂಗಳವಾರ ಚಿತ್ರವು 9.5 ಕೋಟಿ ರೂ. ಗಳಿಸಿತ್ತು.ಕೂಲಿ ಚಿತ್ರ ಬಿಡುಗಡೆಯಾದ ಮೊದಲ ದಿನ 65 ಕೋಟಿ, ಎರಡನೇ ದಿನ 54.75 ಕೋಟಿ, ಮೂರನೇ ದಿನ 39.5 ಕೋಟಿ, ನಾಲ್ಕನೇ ದಿನ 35.25 ಕೋಟಿ, ಐದನೇ ದಿನ 12 ಕೋಟಿ, ಆರನೇ ದಿನ 9.5 ಕೋಟಿ ಮತ್ತು ಅಂತಿಮವಾಗಿ 7ನೇ ದಿನ 6.5 ಕೋಟಿ ಗಳಿಕೆ ಕಂಡಿದೆ.ಈ ಕುಸಿತದ ಹೊರತಾಗಿಯೂ, ಚಿತ್ರದ ಒಟ್ಟಾರೆ ಗಳಿಕೆಯು ವರ್ಷದ ಅತಿದೊಡ್ಡ ಬ್ಲಾಕ್ ಬಸ್ಟರ್ಗಳಲ್ಲಿ ಒಂದಾಗಿದೆ. ಚಿತ್ರ ಬಿಡುಗಡೆಯಾದ ಕೇವಲ ಒಂದು ವಾರದಲ್ಲಿ ₹220 ಕೋಟಿ ಮೈಲಿಗಲ್ಲನ್ನು ಮೀರಿದೆ. ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ನಟನೆಯ ವಾರ್ 2 ಚಿತ್ರವು ಬಿಡುಗಡೆಯಾಗಿದ್ದು, ಸ್ಪರ್ಧೆ ಏರ್ಪಟ್ಟಿದೆ. ಇದೀಗ ಕೂಲಿ ತನ್ನ ಎರಡನೇ ವಾರದಲ್ಲಿ ಹೇಗೆ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಈ ಆ್ಯಕ್ಷನ್ ಚಿತ್ರವು ಲೋಕೇಶ್ ಕನಕರಾಜ್ ಮತ್ತು ರಜನಿಕಾಂತ್ ಅವರ ಮೊದಲ ಸಹಯೋಗವಾಗಿದ್ದು, ಲೋಕೇಶ್ ಅವರ ಆರನೇ ನಿರ್ದೇಶನದ ಚಿತ್ರವಾಗಿದೆ. ಈ ಚಿತ್ರದಲ್ಲಿ ನಾಗಾರ್ಜುನ, ಉಪೇಂದ್ರ, ಸತ್ಯರಾಜ್, ಸೌಬಿನ್ ಶಾಹಿರ್, ಶ್ರುತಿ ಹಾಸನ್ ಮತ್ತು ರಚಿತಾ ರಾಮ್ ಸೇರಿದಂತೆ ಬಹು ತಾರಾಗಣವಿದೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಯೋಜನೆ, ಗಿರೀಶ್ ಗಂಗಾಧರನ್ ಅವರ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಅವರ ಸಂಕಲನವಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







