ಚಿತ್ರದುರ್ಗ: ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಚಿತ್ರದುರ್ಗ,ಇವರ ಸಹಯೋಗದಲ್ಲಿ ರಾಷ್ಟ್ರೀಯ ಬಾಹ್ಯಾಕಾಶದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಗಸ್ಟ್ 23ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಇಸ್ರೋ ಹಿರಿಯ ವಿಜ್ಞಾನಿಗಳಾದ ಶ್ರೀನಿವಾಸ್ ಬಾಹ್ಯಾಕಾಶ ಕುರಿತ ಉಪನ್ಯಾಸ ನೀಡಲಿದ್ದಾರೆ. ಚಿತ್ರದುರ್ಗ ಸೈನ್ಸ್ ಫೌಂಡೇಶನ್ಅಧ್ಯಕ್ಷರಾದ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿದ್ಯಾವೈ.ಎಸ್, ಚಳ್ಳಕೆರೆ ಯರಿಸ್ವಾಮಿ, ಈ.ರುದ್ರಮುನಿ ಭಾಗವಹಿಸುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನಪ್ರಾಂಶುಪಾಲರಾದ ಪ್ರೊ.ಎಂ.ಎನ್.ರವಿಕಾಂತ ವಹಿಸಿಕೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







