ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬ ಇಂದು (ಆಗಸ್ಟ್ 22). ಚಿರಂಜೀವಿ ಭಾರತದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ವಿಶ್ವದಲ್ಲೇ ಅತಿ ಹೆಚ್ಚು ಅಭಿಮಾನಿ ಸಂಘಗಳನ್ನು ಹೊಂದಿದ್ದ ನಟ ಎಂಬ ದಾಖಲೆಯೂ ಸಹ ಅವರ ಹೆಸರಲ್ಲಿತ್ತು. 90ರ ದಶಕದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ಗಿಂತಲೂ ಹೆಚ್ಚಿನ ಸಂಭಾವನೆಯನ್ನು ಚಿರಂಜೀವಿ ಪಡೆಯುತ್ತಿದ್ದರು. ಇಂದು ಮೆಗಾಸ್ಟಾರ್ ಚಿರಂಜೀವಿ ತಮ್ಮ 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವಯಸ್ಸಿನಲ್ಲೂ ಅವರ ಅಭಿಮಾನಿಗಳು, ಸಿನಿಮಾ ಅವಕಾಶಗಳು ಕಡಿಮೆ ಆಗಿಲ್ಲ.ಚಿರಂಜೀವಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ನಟನೆಯ ಎರಡು ಹೊಸ ಸಿನಿಮಾಗಳ ಟೀಸರ್ಗಳು ಬಿಡುಗಡೆ ಆಗಿವೆ. ಚಿರಂಜೀವಿ ನಟಿಸಿರುವ ‘ವಿಶ್ವಂಭರ’ ಹೆಸರಿನ ಫ್ಯಾಂಟಸಿ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದೆ. ಇದೊಂದು ಫ್ಯಾಂಟಸಿ ಕತೆಯನ್ನು ಒಳಗೊಂಡಿದೆ. ಈ ಹಿಂದೆ ಚಿರಂಜೀವಿ ನಟಿಸಿದ್ದ ‘ಅಂಜಿ’ ಸಿನಿಮಾದ ರೀತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಶಾಪಗ್ರಸ್ತ ಸಮುದಾಯವೊಂದನ್ನು ಕಾಪಾಡುವ ನಾಯಕನ ಪಾತ್ರ ಚಿರಂಜೀವಿಯದ್ದು ಎಂಬುದು ಟೀಸರ್ನಿಂದ ತಿಳಿದು ಬರುತ್ತಿದೆ.
ಇದರ ಜೊತೆಗೆ ಚಿರಂಜೀವಿ ನಟಿಸಿ, ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿದೆ. ಸಿನಿಮಾದ ಹೆಸರು ಸಹ ಘೋಷಣೆ ಮಾಡಲಾಗಿದೆ. ಸಿನಿಮಾದ ಹೆಸರು ‘ಮನ ಶಂಕರವರಪ್ರಸಾದ್ ಗಾರು’ ಎಂದಿದೆ. ಸಿನಿಮಾನಲ್ಲಿ ಚಿರಂಜೀವಿ ಹೆಸರು ಶಂಕರವರಪ್ರಸಾದ್. ಸಿನಿಮಾನಲ್ಲಿ ಭದ್ರತಾ ಅಧಿಕಾರಿಯ ಪಾತ್ರದಲ್ಲಿ ಚಿರಂಜೀವಿ ನಟಿಸಿದ್ದು, ಇದೊಂದು ಆಕ್ಷನ್, ಕಾಮಿಡಿ ಸಿನಿಮಾ ಆಗಿರಲಿದೆ. ಈ ಸಿನಿಮಾನಲ್ಲಿ ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಟೀಸರ್ನಲ್ಲಿ ಚಿರಂಜೀವಿ ಬಲು ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ.ಇವೆರಡು ಸಿನಿಮಾಗಳ ಜೊತೆಗೆ ಚಿರಂಜೀವಿ, ನಟ ನಾನಿ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಚಿರಂಜೀವಿ ನಟಿಸುತ್ತಿರುವ ಈ ಸಿನಿಮಾವನ್ನು ಒದೆಲ ಶ್ರೀಕಾಂತ್ ನಿರ್ದೇಶನ ಮಾಡಲಿದ್ದಾರೆ. ಇದೊಂದು ವೈಯಲೆಂಟ್ ಸಿನಿಮಾ ಆಗಿರಲಿದ್ದು, ಸಿನಿಮಾದ ಪೋಸ್ಟರ್ಗಳು ಈಗಾಗಲೇ ಬಿಡುಗಡೆ ಆಗಿವೆ. ಇದರ ಜೊತೆಗೆ ಬಾಬಿ ನಿರ್ದೇಶನ ಮಾಡುತ್ತಿರುವ ಸಿನಿಮಾನಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಆ ಸಿನಿಮಾ ಸಹ ಪಕ್ಕಾ ಆಕ್ಷನ್ ಕಾಮಿಡಿ ಸಿನಿಮಾ ಆಗಿರಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







