ನಟ ದರ್ಶನ್ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ‘ದಿ ಡೆವಿಲ್’ ಸಿನಿಮಾದ ಕೆಲಸಗಳನ್ನು ಮುಂದುವರಿಸಲು ಚಿತ್ರತಂಡ ತೀರ್ಮಾನಿಸಿದೆ. ಪ್ರಚಾರದ ಮೊದಲ ಹಂತವಾಗಿ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿನ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ಈ ಸಾಂಗ್ ರಿಲೀಸ್ ಆಗಿರಬೇಕಿತ್ತು. ಆದರೆ ದರ್ಶನ್ಗೆ ನೀಡಿದ್ದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿತ್ತು. ಆದರೆ ಈಗ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಕೆಲಸ ಮಾಡಿರುವ ಜನಪ್ರಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ‘ದಿ ಡೆವಿಲ್’ ಸಿನಿಮಾಗೆ ಸಂಗೀತ ನೀಡಿದ್ದಾರೆ. ದರ್ಶನ್ ಅವರು ತಮ್ಮ ವೈಯಕ್ತಿಕ ಜೀವನದ ವೈರಲ್ ಆಡಿಯೋದಲ್ಲಿ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂಬ ಮಾತನ್ನು ಹೇಳಿದ್ದರು. ಅದೇ ಮಾತನ್ನು ಇಟ್ಟುಕೊಂಡು ಹಾಡು ಸಿದ್ಧಪಡಿಸಲಾಗಿದೆ.ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ವಿಲನ’, ‘ತಾರಕ್’ ಮುಂತಾದ ಸಿನಿಮಾಗಳನ್ನು ಮಾಡಿದ್ದ ಅವರು ಈಗ ಪಕ್ಕಾ ಮಾಸ್ ಕಥೆಯನ್ನು ಪ್ರೇಕ್ಷಕರ ಎದುರು ತರಲು ಸಜ್ಜಾಗಿದ್ದಾರೆ. ದರ್ಶನ್ ಜೊತೆ ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಕೊನೆ ಹಂತದ ಕೆಲಸಗಳಲ್ಲಿ ಚಿತ್ರತಂಡ ತೊಡಗಿಕೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಈ ಮೊದಲು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆಗ ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಮತ್ತು ಡಬ್ಬಿಂಗ್ ಕೆಲಸಗಳನ್ನು ಅವರು ಮುಗಿಸಿಕೊಟ್ಟರು. ಒಂದು ವೇಳೆ ಜಾಮೀನು ರದ್ದಾದರೂ ಸಿನಿಮಾಗೆ ತೊಂದರೆ ಆಗಬಾರದು ಎಂಬುದು ಅವರ ಉದ್ದೇಶ ಆಗಿತ್ತು. ಜಾಮೀನು ವಜಾ ಆದ ಬಳಿಕ ಅವರು ಮತ್ತೆ ಜೈಲು ವಾಸ ಅನುಭವಿಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







