ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಭಾನು ಮುಷ್ತಾಕ್ ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಭಾನು ಮುಷ್ತಾಕ್ ಆಯ್ಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸಬೇಕು. ಭಾನು ಅವರು ಮುಸ್ಲಿಂ ಆಗಿರುವುದರಿಂದ ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ ಪ್ರತಾಪ್ ಸಿಂಹ ಮಾತನಾಡಿ, ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಮುಷ್ತಾಕ್ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ ಎಂದು ಪ್ರಶ್ನಿಸಿದರು. ಇನ್ನು ಈ ಬಗ್ಗೆ ಸಿ.ಟಿ ರವಿ ಸಹ ಮಾತನಾಡಿದ್ದು ಚಾಮುಂಡಿ ತಾಯಿ ಮೇಲೆ ನಂಬಿಕೆ, ಭಕ್ತಿ ಇದ್ದರೆ ಅವರು ಉದ್ಘಾಟಿಸುತ್ತಾರೆ ಈ ಬಗ್ಗೆ ನಾನೇನು ಕಮೆಂಟ್ ಮಾಡುವುದಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







