ಅರಾರಿಯಾ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (55) ತಮ್ಮ ಮದುವೆ ಕುರಿತು ಮಾತನಾಡಿದ್ದಾರೆ.ಆರ್ ಜೆ.ಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗುವಂತೆ ಸಲಹೆ ನೀಡಿದ್ದರು. ಅವರ ಸಲಹೆ ಬಗ್ಗೆ ತಮ್ಮ ರಾಜಕೀಯ ಮಿತ್ರರು ಮತ್ತು ಕುಟುಂಬದ ಸ್ನೇಹಿತರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಜೋಕ್ ಮಾಡಿದ್ದಾರೆ.ಮತದಾರರ ಅಧಿಕಾರ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಇತ್ತೀಚಿಗೆ ಆರ್ ಜೆಡಿ ಅನ್ನು ತೀವ್ರವಾಗಿ ಟೀಕಿಸಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೇಜಸ್ವಿ, ಚಿರಾಗ್ ಮೊದಲು ಮದುವೆ ಆಗುವುದನ್ನು ಪರಿಗಣಿಸಬೇಕು ಎಂದು ಸಲಹೆ ನೀಡಿದರು.ಆಗ ತೇಜಸ್ವಿ ಅವರಿಂದ ಮೈಕ್ ಕಸಿದುಕೊಂಡ ರಾಹುಲ್, ಇದೇ ರೀತಿಯ ಸಲಹೆಯನ್ನು ಎರಡು ವರ್ಷಗಳ ಹಿಂದೆ ತೇಜಸ್ವಿ ಅವರ ತಂದೆ ನನಗೆ ನೀಡಿದ್ದರು ಎಂದು ಹಾಸ್ಯ ಚಟಾಕಿ ಹಾರಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







