ಸುಮಾರು ದಿನಗಳಿಂದ ಹೊಳಲ್ಕೆರೆಯ ಶಿವಗಂಗಾ ಬಳಿ ಹಾವಳಿ ಕೊಡುತ್ತಿದ್ದ ಚಿರತೆಯನ್ನು ಇಂದು ಬೆಳಿಗ್ಗೆ ಅರಣ್ಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬೀಳುವ ಮೂಲಕ ಚಿರತೆ ಹಾವಳಿಗೆಬ್ರೇಕ್ಹಾಕಿದ್ದಾರೆ.ಹೊಳಲ್ಕೆರೆ RFO ಸತೀಶ್ ನೇತೃತ್ವದಲ್ಲಿ ಬೋನು ಇರಿಸಿ, ಅರಣ್ಯ ಅಧಿಕಾರಿಗಳು ಚಿರತೆಯ ಮೇಲೆ ಕಣ್ಣಿಟ್ಟಿದ್ದರು. ಇಂದು ಬೆಳಿಗ್ಗೆ ಆರು ವರ್ಷದ ಗಂಡು ಚಿರತೆಯನ್ನು ಬೋನಿನ ಮೂಲಕ ಸೆರೆ ಹಿಡಿಯಲಾಗಿದೆ. ಚಿರತೆ ಸುಮಾರು ದಿನಗಳಿಂದ ಸ್ಥಳಯ ಹಳ್ಳಿಗಳಲ್ಲಿ ಕುರಿ ಹಸು ಮತ್ತು ಮಹಿಳೆಯ ಮೇಲೆ ಅಲ್ಲೇ ಮಾಡಿತ್ತು ಹಾಗಾಗಿ ಸ್ಥಳೀಯರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು, ಅರಣ್ಯ ಅಧಿಕಾರಿಗಳು ಕೊನೆಗೂ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







