ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾದ ಈ ಹಾಡಿನ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದರು. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದರ್ಶನ್ ಫ್ಯಾನ್ಸ್ ಮತ್ತೆ ಮತ್ತೆ ಈ ಹಾಡನ್ನು ನೋಡುತ್ತಿದ್ದಾರೆ. ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ಹಾಡು ಬಿಡುಗಡೆ ಆಗಿದೆ. 24 ಗಂಟೆ ಕಳೆಯುವುದರಲ್ಲಿ ಈ ಹಾಡು ಒಂದು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.
ಸೋಶಿಯಲ್ ಮೀಡಿಯಾದಲ್ಲಿ ಕೂಡ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಅಭಿಮಾನಿಗಳು ಮತ್ತು ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್ ಮಾಡುತ್ತಿದ್ದಾರೆ. ಆ ಮೂಲಕ ಸಿನಿಮಾ ಮೇಲೆ ಇರುವ ಕ್ರೇಜ್ ಎಂಥದ್ದು ಎಂಬುದನ್ನು ಫ್ಯಾನ್ಸ್ ತೋರಿಸುತ್ತಿದ್ದಾರೆ. ಒಂದೇ ದಿನದಲ್ಲಿ 10 ಮಿಲಿಯನ್ಗಿಂತ ಅಧಿಕ ವೀವ್ಸ್ ಆಗಿದ್ದಕ್ಕೆ ಅಭಿಮಾನಿಗಳಿಗೆ ಸಂತಸ ಆಗಿದೆ.ದರ್ಶನ್ ಅವರು ಸದ್ಯಕ್ಕೆ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿ. ಇತ್ತೀಚೆಗೆ ಜಾಮೀನು ರದ್ದಾದ ಕಾರಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಯಿತು. ದರ್ಶನ್ ಜೈಲಿನಲ್ಲಿ ಇದ್ದಾಗ ಈ ಹಾಡು ಬಿಡುಗಡೆ ಆಗಬೇಕಾದ ಪರಿಸ್ಥಿತಿ ಬಂತು ಎಂಬುದು ಅಭಿಮಾನಿಗಳ ಪಾಲಿನ ಬೇಸರದ ಸಂಗತಿ. ಈ ಸಿನಿಮಾಗೆ ಈಗಾಗಲೇ ಪ್ರಕಾರ ಕಾರ್ಯ ಆರಂಭಿಸಲಾಗಿದೆ. ಡಿಸೆಂಬರ್ 12ರಂದು ಸಿನಿಮಾ ಬಿಡುಗಡೆ ಆಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







