ಗಂಗಾವತಿ: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಯುವಕನನ್ನು ಬುಧವಾರ ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 5ಕ್ಕೇರಿದೆ.ಸಿಂಗನಾಳ ಗ್ರಾಮದ ಮಂಜುನಾಥ ಬಂಧಿತ ವ್ಯಕ್ತಿ. ಬೆಂಗಳೂರಿನ ಸೈಬರ್‌ಡ್ರೈಂ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಮಂಜುನಾಥ, ಅಶ್ಲೀಲ ಸಂದೇಶ ಕಳಿಸಿ, ತನ್ನ ಐಪಿ ಅಡ್ರೆಸ್ ಡಿಲಿಟ್ ಮಾಡಿದ್ದ. ಜೊತೆಗೆ, ತನ್ನ ಮೊಬೈಲನ್ನು ಕೂಡ ಸ್ವಿಚ್ ಆಫ್ ಮಾಡಿಕೊಂಡು, ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬುಧವಾರ ಈತನನ್ನು ಬಂಧಿಸಿದ್ದಾರೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಹೇಳಿಕೆಯನ್ನು ಉಲ್ಲೇಖಿಸಿ ನಟಿ ರಮ್ಯಾ ಪೋಸ್ಟ್ ಮಾಡಿದ್ದರು. ಇದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು. ರಮ್ಯಾ ಪೋಸ್ಟ್‌ಗೆ ಪ್ರತಿಯಾಗಿ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಗಳನ್ನು ಮಾಡುವುದಕ್ಕೆ ಶುರು ಮಾಡಿದ್ದರು. ತೀರ ಕೆಟ್ಟ ಸಂದೇಶಗಳನ್ನು ಕಳಿಸಿದ್ದಕ್ಕೆ ಕೆರಳಿದ ರಮ್ಯಾ, ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



