ಚಿತ್ರದುರ್ಗ: ಬಾರಿ ಗಾಳಿಗೆ ಕಟ್ಟಡದ ಮೇಲಿದ್ದ ಟವರ್ ಕಂಬ ಮನೆ ಮೇಲೆ ಬಿದ್ದಿರುವ ಘಟನೆ ಚಿತ್ರದುರ್ಗ ನಗರದ ಕೆಳಗೋಟೆಯಲ್ಲಿ ನಡೆದಿದೆ. ಮಾಯಪ್ಪ ಎಂಬುವವರ ಮನೆಯ ಪಕ್ಕದಲ್ಲಿ ಸುಮಾರು ವರ್ಷಗಳಿಂದ ಮರ್ಚೆಂಟ್ ಬ್ಯಾಂಕ್ ಗೆ ಸಂಬಂಧಪಟ್ಟ GPS ಟವರ್ ನಿರ್ಮಿಸಲಾಗಿತ್ತು. ಇಂದು ಬೀಸಿದ ಬಿರುಗಾಳಿಯ ರಭಸಕ್ಕೆ ಮಾಯಪ್ಪ ಅವ್ರ ಮನೆ ಮೇಲೆ ಬಿದ್ದಿದ್ದು, ಟವರ್ ಬಿದ್ದ ರಭಸಕ್ಕೆ ಮನೆಯ ಶೀಟ್ ಗಳು ಪುಡಿಪುಡಿಯಾಗಿವೆ. ಇನ್ನು ಘಟನಾ ಸ್ಥಳಕ್ಕೆ ಮರ್ಚೆಂಟ್ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



