ಬೆಂಗಳೂರು: ಕನ್ನಡದ ನಟ ಪ್ರಥಮ್ ಗೆ ದುಷ್ಕರ್ಮಿಗಳು ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಥಮ್ ಮೇಲೆ ರೌಡಿ ಗ್ಯಾಂಗ್ ಒಂದು ಅಟ್ಯಾಕ್ ಮಾಡಲು ಪ್ರಯತ್ನಿಸಿತ್ತು. ಈ ವೇಳೆ ರೌಡಿಗಳ ಜೊತೆ ರಕ್ಷಕ್ ಬುಲೆಟ್ ಸಹ ಇದ್ದ ಎಂದು ಲಾಯರ್ ಜಗದೀಶ್ ಜೊತೆ ಪ್ರಥಮ್ ದೂರವಾಣಿ ಕರೆ ವೇಳೆ ಹೇಳಿದ್ದಾರೆ. ಚಿತ್ರೀಕರಣಕ್ಕೆ ಹೋಗುವ ಮುನ್ನ ನಟ ಪ್ರಥಮ್ ದೊಡ್ಡಬಳ್ಳಾಪುರದ ದೇವಸ್ಥಾನಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಈ ಬಗ್ಗೆ ಪ್ರಥಮ್ ಲಾಯರ್ ಜಗದೀಶ್ ಜೊತೆ ಮಾತನಾಡಿರುವ ಆಡೀಯೋ ವೈರಲ್ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಪ್ರಥಮ್ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಬಲವಂತವಾಗಿ ಕರೆದೊಯ್ದು ನಮ್ಮ ಡಿ ಬಾಸ್ ಬಗ್ಗೆ ಮಾತನಾಡುತ್ತಿಯಾ ಅಂತ ಹಲ್ಲೆಗೆ ಯತ್ನಿಸಿ, ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ. ದುಷ್ಕರ್ಮಿಗಳು ನನಗೆ ಬೆದರಿಕೆ ಹಾಕುತ್ತಿದ್ದಾಗ ರಕ್ಷಕ್ ಬುಲೆಟ್ ಸಹ ಆ ಗ್ಯಾಂಗ್ ಜೊತೆ ಇದ್ದ ಎಂದು ಪ್ರಥಮ್ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



